ನವದೆಹಲಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ಧ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಇದೀಗ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ.
ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿನೀಯರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಇದೀಗ ಆಲ್ ಇಂಡಿಯಾ ಮುಸ್ಲಿಂ ಲಾ ಬೋರ್ಡ್ ಸಹ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೇಲ್ಮನವಿ ಸಲ್ಲಿಸಿದೆ. ಅಲ್ಲದೆ ಮೊಹ್ಮದ್ ರಹಿಂ, ಮುನಿಸ್ ಬುಸ್ರಾ, ಜೆಲಿಸಾ ಸುಲ್ತಾನ ಅವರು ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಹಿಜಾಬ್ ವಿವಾದ ಕುರಿತು ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿತ್ತು.