ನವದೆಹಲಿ(New delhi): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟಂಬರ್ 5ಕ್ಕೆ ಮುಂದೂಡಿದೆ.
ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿ ಕರ್ನಾಟಕ ಸರ್ಕಾರದ ಆದೇಶ ಎತ್ತಿ ಹಿಡಿದ ರಾಜ್ಯ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿಗಳನ್ನ ಸಲ್ಲಿಸಲಾಗಿತ್ತು.
ನೂತನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ಯು.ಯು. ಲಲಿತ್ ಅವರ ಮೊದಲ ಕೆಲಸದ ದಿನವಾದ ಇಂದು ಈ ಮಹತ್ವದ ಅರ್ಜಿ ವಿಚಾರಣೆಗೆ ಬಂತು. ಕರ್ನಾಟಕ ಸರ್ಕಾರ ಮತ್ತು ಪ್ರತಿವಾದಿಗಳಿಗೆ ನೋಟೀಸ್ ಜಾರಿಗೊಳಿಸಿ ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್ 5ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ.
Saval TV on YouTube