ಮನೆ ಕಾನೂನು ಹಿಜಾಬ್ ವಿವಾದ: ನಾಲ್ಕೂ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್

ಹಿಜಾಬ್ ವಿವಾದ: ನಾಲ್ಕೂ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್

0

ನವದೆಹಲಿ: ಹಿಜಾಬ್ ವಿವಾದ ರಾಜ್ಯದಲ್ಲಿ ತಾರಕಕ್ಕೆ ಏರಿದ್ದು, ಇಂದು ಹೈಕೋರ್ಟ್​ ಅರ್ಜಿದಾರರು ಸಲ್ಲಿಕೆ ಮಾಡಿರುವ ನಾಲ್ಕೂ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದೆ.

ದೆಹಲಿಗೆ ಭೇಟಿ ನೀಡಿದ್ದ ಸಿಎಂ ಬೊಮ್ಮಾಯಿ, ಅಲ್ಲಿನ ಅಂತಾರಾಜ್ಯ ಜಲ ವಿವಾದದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿ, ಎಲ್ಲ ಸಾರ್ವಜನಿಕರಿಗೂ ಶಾಂತಿಯನ್ನು ಕಾಪಾಡಲು ಮನವಿ ಮಾಡಿದ್ದಾರೆ. ಸಂಬಂಧಪಟ್ಟವರೆಲ್ಲಾ ಶಾಂತಿಯನ್ನು ಕಾಪಾಡಿಕೊಳ್ಳಬೇಕು ಮತ್ತು ಮಕ್ಕಳನ್ನು ಓದಲು ಬಿಡಬೇಕು. ಇಂದು ಹೈಕೋರ್ಟ್‌ನಲ್ಲಿ ವಿಚಾರಣೆಯಾಗಲಿದೆ. ತೀರ್ಪು ಬರುವವರೆಗೆ ಕಾಯೋಣ ಎಂದು ಮನವಿ ಮಾಡಿದ್ದಾರೆ.