ಮನೆ ರಾಜಕೀಯ ಹಿಜಾಬ್ ವಿವಾದ: ಮುಸ್ಲಿಂ ಮಹಿಳೆಯರ ಪರ ಪ್ರಿಯಾಂಕಾ ಗಾಂಧಿ ಟ್ವೀಟ್

ಹಿಜಾಬ್ ವಿವಾದ: ಮುಸ್ಲಿಂ ಮಹಿಳೆಯರ ಪರ ಪ್ರಿಯಾಂಕಾ ಗಾಂಧಿ ಟ್ವೀಟ್

0

ನವದೆಹಲಿ: ರಾಜ್ಯದಲ್ಲಿ ತಾರಕಕ್ಕೇರಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ “ದೇಶದಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಬೇಕು,” ಎಂದು ಆಗ್ರಹಿಸಿದ್ದಾರೆ.

ಭಾರತದಲ್ಲಿ ಸಂವಿಧಾನವು ಹೆಣ್ಣುಮಕ್ಕಳಿಗೂ ಸಮಾನ ಹಕ್ಕನ್ನು ನೀಡಿದೆ. ಮಹಿಳೆಯರು ಯಾವ ಬಟ್ಟೆಯನ್ನು ಹಾಕಿಕೊಳ್ಳಬೇಕು ಎಂಬುದನ್ನು ನಿರ್ಧರಿಸುವುದು ಅವರ ವೈಯಕ್ತಿಕ ಹಕ್ಕು ಎನ್ನುವುದರ ಮೂಲಕ ಹಿಜಾಬ್ ಧರಿಸುವುದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಹೆಣ್ಣುಮಕ್ಕಳು ಬಿಕಿನಿಯಾದರೂ ಹಾಕಲಿ, ಮುಸುಕಾದರೂ ಧರಿಸಲಿ. ಜೀನ್ಸ್ ಬಟ್ಟೆಯೇ ಆಗಿರಲಿ ಅಥವಾ ಹಿಜಾಬ್ ಆದರೂ ಆಗಿರಲಿ. ತಾನು ಏನು ಧರಿಸಬೇಕು ಎಂಬುದನ್ನು ನಿರ್ಧರಿಸುವುದು ಮಹಿಳೆಯ ಹಕ್ಕು. ಭಾರತೀಯ ಸಂವಿಧಾನವೇ ಮಹಿಳೆಯರಿಗೆ ಈ ಹಕ್ಕನ್ನು ನೀಡಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಿ,” ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.