ಮನೆ ಕಾನೂನು ಹಿಜಾಬ್ ವಿವಾದ: ಹೈಕೋರ್ಟ್ ಮೌಖಿಕ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ

ಹಿಜಾಬ್ ವಿವಾದ: ಹೈಕೋರ್ಟ್ ಮೌಖಿಕ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ

0

ಬೆಂಗಳೂರುಹಿಜಾಬ್ ವಿವಾದ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಮೌಖಿಕ ಮಧ್ಯಂತರ ಆದೇಶ ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಧಾರ್ಮಿಕ ಗುರುತು ಇರುವ ಬಟ್ಟೆಗಳನ್ನು ಶಾಲೆ-ಕಾಲೇಜುಗಳಲ್ಲಿ ಧರಿಸಬಾರದು, ಹಿಜಾಬ್ ಸಂಘರ್ಷ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 9ನೇ ತರಗತಿ ನಂತರ ಶಾಲೆ-ಕಾಲೇಜುಗಳನ್ನು ಪುನಾರಂಭ ಮಾಡಬೇಕೆಂದು ಹೈಕೋರ್ಟ್ ನಿನ್ನೆ ಮಧ್ಯಂತರ ಆದೇಶ ನೀಡಿತ್ತು. ಅದರಂತೆ ಸೋಮವಾರದಿಂದ ಶಾಲೆ-ಕಾಲೇಜುಗಳು ಪುನಾರಂಭವಾಗಲಿದೆ. 

ಕರ್ನಾಟಕ ಹೈಕೋರ್ಟ್ ನಿನ್ನೆ ಗುರುವಾರ ನೀಡಿರುವ ಮೌಖಿಕ ಆದೇಶವನ್ನು ಪ್ರಶ್ನಿಸಿ ತಮ್ಮ ವಕೀಲರ ಮೂಲಕ ಅರ್ಜಿದಾರರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸಂವಿಧಾನದ ಆಶಯಗಳಿಗೆ ವಿರುದ್ಧವಾದ, ಧಾರ್ಮಿಕ ಸ್ವಾತಂತ್ರ್ಯವನ್ನು ಪಾಲಿಸುವ ಹಕ್ಕನ್ನು ವಿರೋಧಿಸುವ ತೀರ್ಪನ್ನು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ನೀಡಿದೆ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಸುಪ್ರೀಂ ಕೋರ್ಟ್ ನಲ್ಲಿ ಇಂದು ಬೆಳಗ್ಗೆ ವರ್ಚುವಲ್ ಮೂಲಕ ಹಿಜಾಬ್ ವಿವಾದ ಸಂಘರ್ಷ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಹಿಂದಿನ ಲೇಖನಹಿಜಾಬ್ ಪರ, ವಿರೋಧದ ಪ್ರತಿಭಟನೆಗಳಿಗೆ ಅನುಮತಿ ಇಲ್ಲ​: ನಗರ ಪೋಲಿಸ್ ಆಯುಕ್ತ ಡಾ. ಚಂದ್ರಗುಪ್ತ
ಮುಂದಿನ ಲೇಖನನಾನೇ ಚಾಮುಂಡೇಶ್ವರಿಗೆ ಬರುತ್ತೇನೆ: ಹೆಚ್‍ ಡಿಕೆ