ನವದೆಹಲಿ(New Delhi): ಹಿಜಾಬ್(hijab) ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ(Karnataka High court Judges) ಬೆದರಿಕೆ ಹಾಕಿದ್ದ ಆರೋಪಿ ಸಲ್ಲಿಸಿದ್ದ ಮನವಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ವ್ಯಕ್ತಿ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿತ್ತು. ಆದರೆ, ಆ ಪ್ರಕರಣವನ್ನು ಮಧುರೈಗೆ ವರ್ಗಾಯಿಸುವಂತೆ ಅಥವಾ ವಜಾಗೊಳಿಸುವಂತೆ ಆರೋಪಿ ಅರ್ಜಿ ಸಲ್ಲಿಸಿದ್ದನು.
ತಮಿಳುನಾಡು ಮೂಲದ ಇಸ್ಲಾಮಿಕ್ ಸಂಘಟನೆಗಳಿಂದ ಕರ್ನಾಟಕ ಹೈಕೋರ್ಟ್ ಜಡ್ಜ್ಗಳಿಗೆ ಜೀವ ಬೆದರಿಕೆ ಹಾಕಿರುವ ಆರೋಪವಿದ್ದು, ಈ ಬೆದರಿಕೆಯ ನಂತರ ಮುಖ್ಯ ನ್ಯಾಯಮೂರ್ತಿ ಸೇರಿ ಮೂವರು ನ್ಯಾಯಮೂರ್ತಿಗಳಿಗೆ ವೈ ಶ್ರೇಣಿಯ ಭದ್ರತೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ನಂತರ ತನಿಖೆ ನಡೆಸಿದ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.ಇದರಲ್ಲಿ ಓರ್ವ ವ್ಯಕ್ತಿ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ನಿಂದ ಮಧುರೈಗೆ ಪ್ರಕರಣವನ್ನು ವರ್ಗಾಯಿಸಲು ಅಥವಾ ವಜಾಗೊಳಿಸಲು ಮನವಿ ಸಲ್ಲಿಸಿದ್ದನು.














