ಮನೆ ರಾಜಕೀಯ ಹಿಜಾಬ್​ ವಿವಾದ; ತಾಯಿ ಸರಸ್ವತಿ ತಾರತಮ್ಯ ಮಾಡೋದಿಲ್ಲ:  ರಾಹುಲ್​ ಗಾಂಧಿ

ಹಿಜಾಬ್​ ವಿವಾದ; ತಾಯಿ ಸರಸ್ವತಿ ತಾರತಮ್ಯ ಮಾಡೋದಿಲ್ಲ:  ರಾಹುಲ್​ ಗಾಂಧಿ

0

ಮಹಿಳಾ ಕಾಲೇಜ್ ನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈ ವಿವಾದದ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಹಿಜಾಬ್​​ನಿಂದಾಗಿ ಹೆಣ್ಣುಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳಲಾಗುತ್ತಿದೆ. ಆ ದೇವಿ ಸರಸ್ವತಿ ಎಲ್ಲರಿಗೂ ಒಳ್ಳೆಯ ಬುದ್ದಿ ಕೊಡಲಿ, ಆ ತಾಯಿ ಯಾರನ್ನೂ ಭೇದ ಭಾವ ಮಾಡುವುದಿಲ್ಲ ಎಂದು ನಂಬಿದ್ದೇನೆ ಎಂದಿದ್ದಾರೆ.

ಹಿಜಾಬ್ ವಿವಾದ ಈಗ ರಾಷ್ಟ್ರೀಯ ವಿವಾದವಾಗಿ ಮಾರ್ಪಟ್ಟಿದೆ. ಈ ನಡುವೆ ಹಿಜಾಬ್​ ಬಗ್ಗೆ ರಾಹುಲ್​ ಗಾಂಧಿ ಟ್ವೀಟ್​ ಮಾಡಿ, ಹಿಜಾಬ್​​ನಿಂದಾಗಿ ಹೆಣ್ಣುಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳಲಾಗುತ್ತಿದೆ. ನಾವು ದೇಶದ ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಭವಿಷ್ಯವನ್ನು ಹಾಳು ಮಾಡುತ್ತಿದೇವೆ. ಆ ದೇವಿ ಸರಸ್ವತಿ ಎಲ್ಲರಿಗೂ ಒಳ್ಳೆಯ ಬುದ್ದಿ ಕೊಡಲಿ, ಆ ತಾಯಿ ಯಾರನ್ನೂ ಭೇದ ಭಾವ ಮಾಡುವುದಿಲ್ಲ ಎಂದು ನಂಬಿದ್ದೇನೆ ಎಂದು ಟ್ವೀಟ್​​​ ಮಾಡಿದ್ದಾರೆ.

ನಮಗೆ ಧರ್ಮದ ಕಟ್ಟುಪಾಡುಗಳೇ ಮುಖ್ಯ, ಇದು ನಮ್ಮ ಹಕ್ಕು ಎಂದು ವಿದ್ಯಾರ್ಥಿನಿಯರು ಹಠಕ್ಕೆ ಬಿದ್ದಿದ್ದು, ಪರೋಕ್ಷವಾಗಿ ಕೆಲ ಸಂಘಟನೆಗಳು ಇದಕ್ಕೆ ಸಾಥ್ ನೀಡುತ್ತಿವೆ. ಹೀಗಾಗಿ ಪರಿಸ್ಥಿತಿ ಮತ್ತಷ್ಟು ಇನ್ನಷ್ಟು ಬಿಗಡಾಯಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.ಕಳೆದ 37 ವರ್ಷಗಳಿಂದ ಉಡುಪಿಯ ಪದವಿಪೂರ್ವ ಮಹಿಳಾ ಕಾಲೇಜಿನಲ್ಲಿ ಸರ್ವಧರ್ಮದ ವಿದ್ಯಾರ್ಥಿನಿಯರು ಸಮವಸ್ತ್ರ ಮಾತ್ರ ಧರಿಸಿ ತರಗತಿಗೆ ಹಾಜರಾಗುತ್ತಿದ್ದರು. ಹಿಜಾಬ್ ಧರಿಸಿ ಬಂದವರು, ತರಗತಿ ಪ್ರವೇಶಿಸುವಾಗ ಅದನ್ನು ತೆಗೆದಿರಿಸಿ ಪಾಠ ಕೇಳುತ್ತಿದ್ದರು. ಈಗ ನೂರಕ್ಕೂ ಅಧಿಕ ಮುಸ್ಲಿಂ ವಿದ್ಯಾರ್ಥಿನಿಯರು ಇಲ್ಲಿ ಪಿಯುಸಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಹಿಜಾಬ್ ವಿವಾದ ಅಂತ ಆರಂಭವಾಗಿರುವುದು ಇದೇ ಮೊದಲಾಗಿದೆ. ಕೆಲ ಸಂಘಟನೆಗಳ ಬೆಂಬಲದೊಂದಿಗೆ ವಿದ್ಯಾರ್ಥಿನಿಯರು ಈ ಹೋರಾಟ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ಹಿಂದಿನ ಲೇಖನಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಫೋಟೋ ಕಡ್ಡಾಯ: ಹೈಕೋರ್ಟ್ ತೀರ್ಮಾನ
ಮುಂದಿನ ಲೇಖನಜಮ್ಮು-ಕಾಶ್ಮೀರದಲ್ಲಿ 5.7 ತೀವ್ರತೆಯ ಭೂಕಂಪನ