ಮನೆ ಸುದ್ದಿ ಜಾಲ ಹಿಜಾಬ್ ವಿವಾದ: ಪ್ರವೇಶ ಪತ್ರ ಪಡೆದು ಪರೀಕ್ಷೆ ಬರೆಯದ ವಿದ್ಯಾರ್ಥಿನಿಯರು

ಹಿಜಾಬ್ ವಿವಾದ: ಪ್ರವೇಶ ಪತ್ರ ಪಡೆದು ಪರೀಕ್ಷೆ ಬರೆಯದ ವಿದ್ಯಾರ್ಥಿನಿಯರು

0

ಉಡುಪಿ(Udupi): ಹಿಜಾಬ್‌ಗಾಗಿ ಕಾನೂನು ಹೋರಾಟ ನಡೆಸುತ್ತಿರುವ ಇಬ್ಬರು ಮುಸ್ಲಿಂ ವಿದ್ಯಾರ್ಥಿನಿಯರಾದ ಅಲಿಯಾ ಅಸಾದಿ ಹಾಗೂ ರೇಶಮ್ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದಕ್ಕೆ ಪರೀಕ್ಷೆ ಬರೆಯದೆ ಪರೀಕ್ಷಾ ಕೇಂದ್ರದಿಂದ ಹೊರ ನಡೆದರು.

ಇದಕ್ಕೂ ಮುನ್ನ ಪರೀಕ್ಷೆಗೆ ಕೆಲವೇ ಕ್ಷಣಗಳು ಬಾಕಿ ಇರುವಂತೆ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು ಪ್ರವೇಶ ಪತ್ರ ಪಡೆದುಕೊಂಡು ಪರೀಕ್ಷಾ ಕೇಂದ್ರವಾದ ವಿದ್ಯೋದಯ ಕಾಲೇಜಿಗೆ ಬಂದರು.

ಈ ಸಂದರ್ಭ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಮಾಡಿದರು. ಆದರೆ ಪ್ರಾಂಶುಪಾಲರು ಅವಕಾಶ ನೀಡಲಿಲ್ಲ. ಪರೀಕ್ಷೆಗೆ ಹಾಜರಾಗುವ ಅವಧಿ‌ ಮುಕ್ತಾಯವಾದ ಕೂಡಲೇ 10.45ಕ್ಕೆ ಸಿಬ್ಬಂದಿ ಪರೀಕ್ಷಾ ಕೇಂದ್ರದಿಂದ ವಿದ್ಯಾರ್ಥಿನಿಯರನ್ನು ಹೊರಗೆ ಕಳುಹಿಸಿದ್ದಾರೆ.

ಹಿಂದಿನ ಲೇಖನರೋಹಿಣಿ ಕೋರ್ಟ್ ಆವರಣದಲ್ಲಿ ಸಿಡಿದ ಗುಂಡು
ಮುಂದಿನ ಲೇಖನಗುಬ್ಬಿ: ಇಬ್ಬರು ಯುವಕರ ಹತ್ಯೆ