ನವದೆಹಲಿ: ಹಿಜಾಬ್ ಮತ್ತು ಕೇಸರಿ ಶಾಲಿನ ಸಂಗರ್ಷ ತಾರಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಮಂಗಳವಾರ ದೆಹಲಿಯಿಂದ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿರುವ ಮುಖ್ಯಮಂತ್ರಿಗಳು, ಸಂಘರ್ಷ ಮುಂದುವರಿದಿರುವ ಕಾಲೇಜುಗಳಿಗೆ ಕನಿಷ್ಠ ಒಂದು ವಾರದ ಅವಧಿಗೆ ರಜೆ ಘೋಷಿಸುವಂತೆ ಸೂಚಿಸಿದರು ಎಂದು ಮೂಲಗಳು ತಿಳಿಸಿದೆ.
ಈ ಸಂಬಂಧ ಸಚಿವರು ಕೂಡಲೇ ಎಲ್ಲ ಜಿಲ್ಲೆಗಳಿಂದ ಮಾಹಿತಿ ಕಲೆ ಹಾಕಿ, ಆದೇಶ ಹೊರಡಿಸುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿ, ಸ್ಥಳೀಯ ಪರಿಸ್ಥಿತಿಗೆ ತಕ್ಕಂತೆ ರಜೆ ಘೋಷಿಸುವಂತೆ ಈ ಸೂಚನೆ ನೀಡಿದ್ದಾರೆ.
‘ಶಿವಮೊಗ್ಗ ಮತ್ತು ಬಾಗಕೋಟೆ ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈಮೀರುವ ಹಂತ ತಲುಪಿದೆ. ಈ ಹಿನ್ನೆಲೆಯಲ್ಲಿ ಆಯಾ ಜಿಲ್ಲಾ ಶಿಕ್ಷಣಾಧಿಕಾರಿಗೆ ರಜೆ ಘೋಷಿಸುವ ಅಧಿಕಾರ ನೀಡಲಾಗಿದೆ’ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.