ಮನೆ ರಾಜಕೀಯ ಹಿಜಾಬ್, ಕೇಸರಿ ಶಾಲು ವಿವಾದ: ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ

ಹಿಜಾಬ್, ಕೇಸರಿ ಶಾಲು ವಿವಾದ: ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ

0

ಬೆಂಗಳೂರುರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ವಿಕೋಪಕ್ಕೆ ತಿರುಗಿದ್ದು, ಹಲವು ಜಿಲ್ಲೆಗಳಲ್ಲಿ ಕಲ್ಲು ತೂರಾಟ, ಹಲ್ಲೆ ನಡೆದಿದೆ.

ಈ ಮಧ್ಯೆ ಹಿಜಾಬ್-ಕೇಸರಿ ವಿವಾದ ಹೈಕೋರ್ಟ್ ಅಂಗಳಕ್ಕೆ ತಲುಪಿದ್ದು ಇಂದು ಅಪರಾಹ್ನ 2.30ಕ್ಕೆ ಹೈಕೋರ್ಟ್ ನ ಏಕಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿ ಹೈಕೋರ್ಟ್ ಏನು ತೀರ್ಪು ನೀಡಲಿದೆ ಎಂಬ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ.

ಮುಖ್ಯಮಂತ್ರಿಗಳ ಮಹತ್ವದ ಸಭೆ: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಳಗ್ಗೆ 11 ಗಂಟೆಗೆ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಅದರಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ ಸಿ ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಮತ್ತು ಇತರ ಜಿಲ್ಲಾ ಉಸ್ತುವಾರಿ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರು ಭಾಗವಹಿಸಲಿದ್ದಾರೆ.

ಹಿಜಾಬ್-ಕೇಸರಿ ವಿವಾದ, ಮುಂದಿನ ಕ್ರಮಗಳು, ವಿವಿಧ ಜಿಲ್ಲೆಗಳಲ್ಲಿನ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಸಿಎಂ ಬೊಮ್ಮಾಯಿಯವರು ಗಂಭೀರವಾದ ಚರ್ಚೆ ನಡೆಸಲಿದ್ದು, ಪ್ರತಿ ಜಿಲ್ಲೆಗಳಿಂದ ಮಾಹಿತಿ ಪಡೆದುಕೊಳ್ಳಲಿದ್ದಾರೆ.

ನಿನ್ನೆ ರಾತ್ರಿ ಇಲಾಖೆಯ ಅಧಿಕಾರಿಗಳ ಜೊತೆ ಮಹತ್ವದ ತುರ್ತು ಸಭೆ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಹಿಜಾಬ್-ಕೇಸರಿ ಶಾಲು ವಿವಾದ ವಿಚಾರದಲ್ಲಿ ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯದ 19 ಜಿಲ್ಲೆಗಳ 55 ಕಾಲೇಜುಗಳಲ್ಲಿ ಪ್ರತಿಭಟನೆ ತೀವ್ರವಾಗಿದೆ. 

 ಪರಿಸ್ಥಿತಿ ವಿಕೋಪಕ್ಕೆ ಹೋದ ಕಾರಣಕ್ಕಾಗಿ ಇಂದಿನಿಂದ 3 ದಿನ ರಾಜ್ಯಾದ್ಯಂತ 9ನೇ ತರಗತಿಯಿಂದ ಕಾಲೇಜುವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಹಿಂದಿನ ಲೇಖನಭಾರತೀಯರಲ್ಲಿ ಕ್ಷಮೆಯಾಚಿಸಿದ ಕೆಎಫ್ ಸಿ, ಪಿಜ್ಜಾ ಹಟ್
ಮುಂದಿನ ಲೇಖನದೇಶದಲ್ಲಿ ಲಕ್ಷಕ್ಕಿಂತ ಕಡಿಮೆ ಕೊರೊನಾ ಸೋಂಕಿತರ ಸಂಖ್ಯೆ