ಮನೆ ರಾಜ್ಯ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ

0

ಹೆಬ್ರಿ (Hebri): ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತವಾಗಿದೆ. ಘಾಟಿಯ ನಾಲ್ಕನೇ ತಿರುವಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು ಮರಗಳು ಬಿದ್ದಿವೆ.

ಗುಡ್ಡ ಕುಸಿತವಾಗಿರುವುದರಿಂದ ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುಡ್ಡ ತೆರವು ಕಾರ್ಯ ಅರಂಭವಾಗಿದ್ದರೂ ವಾಹನಗಳ ಸುಗಮ ಸಂಚಾರಕ್ಕೆ ಸಮಯ ಬೇಕಾಗಬಹುದು‌. ನಿರಂತರ ಸುರಿಯುತ್ತಿರುವ ಮಳೆಯಿಂದ ತೆರವು ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಹಲವು ದಿನಗಳಿಂದ ಹೆಬ್ರಿ ತಾಲ್ಲೂಕು ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆ ಪರಿಸರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಕರಾವಳಿ ಹಾಗೂ ಮಲೆನಾಡನ್ನು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದು ಉಡುಪಿ ಶಿವಮೊಗ್ಗ ಜಿಲ್ಲೆಗಳ ನಡುವಿನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಸದ್ಯ ವಾಹನಗಳು ಬದಲಿ ಮಾರ್ಗದಲ್ಲಿ ಉಡುಪಿ ಜಿಲ್ಲೆಯಿಂದ ಶಿವಮೊಗ್ಗಕ್ಕೆ ಹಾಗೂ ಶಿವಮೊಗ್ಗ ಜಿಲ್ಲೆಯಿಂದ ಕರಾವಳಿ ಭಾಗಕ್ಕೆ ಬರಬೇಕಾಗಿದೆ.

ಹಿಂದಿನ ಲೇಖನದೇಶದಲ್ಲಿ 18,257 ಕೋವಿಡ್ ಪಾಸಿಟಿವ್‌
ಮುಂದಿನ ಲೇಖನಸಚಿವರ ಹೆಸರು ಹೇಳಿಕೊಂಡು ಐಎಎಸ್‌ ಅಧಿಕಾರಿಗೆ ಬೆದರಿಕೆ: ಆರೋಪಿ ಬಂಧನ