ಮನೆ ರಾಷ್ಟ್ರೀಯ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ: ಮತದಾನ ಆರಂಭ

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ: ಮತದಾನ ಆರಂಭ

0

ಶಿಮ್ಲಾ: ಪರ್ವತ ರಾಜ್ಯ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ಇಂದು ಶನಿವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

ಇಂದು ಸಾಯಂಕಾಲ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ಮುಂದುವರಿಯಲಿದೆ.

68 ಸದಸ್ಯ ಬಲದ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಎರಡನೇ ಬಾರಿಗೆ ಅಧಿಕಾರ ಹಿಡಿದು ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದೆ. ಅತ್ತ ಕಾಂಗ್ರೆಸ್‌ಗೆ ಅಳಿವು-ಉಳಿವಿನ ಪ್ರಶ್ನೆ ಎದುರಾಗಿದೆ.

ಹಿಮಾಚಲ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ಪ್ರತಿ ಮತವು ಸಮೃದ್ಧ ರಾಜ್ಯವನ್ನು ನಿರ್ಮಿಸಲು ನೆರವಾಗಲಿದೆ ಎಂದು ಮುಖ್ಯಮಂತ್ರಿ ಜೈರಾಮ್‌ ಠಾಕೂರ್‌ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಒಂದು ಲಕ್ಷ ಉದ್ಯೋಗಗಳನ್ನು ಒದಗಿಸುವುದು ಮತ್ತು ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಹಿಮಾಚಲದಲ್ಲಿ 55 ಲಕ್ಷಕ್ಕೂ ಹೆಚ್ಚು ಮತದಾರರು 412 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.

ಮತಗಟ್ಟೆಗಳು: 7,881 ಮತಗಟ್ಟೆಗಳಲ್ಲಿ 981 ನಿರ್ಣಾಯಕ ಮತ್ತು 901 ದುರ್ಬಲ ಮತಗಟ್ಟೆಗಳು ಎಂದು ವರ್ಗೀಕರಿಸಲಾಗಿದೆ. ಕಾಂಗ್ರಾ ಜಿಲ್ಲೆಯಲ್ಲಿ ಗರಿಷ್ಠ 1,625 ಮತಗಟ್ಟೆಗಳಿದ್ದರೆ, ಲಾಹೌಲ್-ಸ್ಪಿತಿ ಜಿಲ್ಲೆಯಲ್ಲಿ ಅತಿ ಕಡಿಮೆ 92, ಗ್ರಾಮೀಣ ಪ್ರದೇಶದಲ್ಲಿ 7,235 ಮತ್ತು ನಗರ ಪ್ರದೇಶಗಳಲ್ಲಿ 646 ಮತಗಟ್ಟೆಗಳಿವೆ. ಅಲ್ಲದೆ, ಸಿಧ್ಬರಿ (ಧರ್ಮಶಾಲಾ), ಬಾರಾ ಭಂಗಲ್ (ಬೈಜ್ನಾಥ್) ಮತ್ತು ಧಿಲ್ಲೋನ್ (ಕಸೌಲಿ) ನಲ್ಲಿ ಮೂರು ಸಹಾಯಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಹಿಂದಿನ ಲೇಖನಮಳೆ: ರಾಜ್ಯದ ಐದು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್
ಮುಂದಿನ ಲೇಖನಆನ್’ಲೈನ್’ನಲ್ಲಿ ಹಣದ ವ್ಯವಹಾರ: ವಂಚನೆಗೊಳಗಾದ ಉಪನ್ಯಾಸಕಿ ಆತ್ಮಹತ್ಯೆ