ಮನೆ ಸುದ್ದಿ ಜಾಲ ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್ ಅತ್ಯಾಚಾರ ಪ್ರಕರಣದಲ್ಲಿ ಬಂಧನ..!

ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್ ಅತ್ಯಾಚಾರ ಪ್ರಕರಣದಲ್ಲಿ ಬಂಧನ..!

0

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್‌ನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸಂತ್ರಸ್ತೆ ನಟ ಆಶಿಶ್ ಕಪೂರ್ ವಿರುದ್ಧ ದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಶಿಶ್ ಕಪೂರ್ ಹಾಗೂ ನಾನು ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದು, ಬಳಿಕ ಆಗಸ್ಟ್ ತಿಂಗಳಲ್ಲಿ ದೆಹಲಿಯಲ್ಲಿ ಆಯೋಜಿಸಲಾಗಿದ್ದ, ಪಾರ್ಟಿಯೊಂದಕ್ಕೆ ಆಹ್ವಾನಿಸಿದ್ದರು. ಹೀಗಾಗಿ ನಾನು ಪಾರ್ಟಿಗೆ ಹೋಗಿದ್ದೆ. ಈ ವೇಳೆ ವಾಶ್ ರೂಂನಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಜೊತೆಗೆ ವಿಡಿಯೋ ಚಿತ್ರೀಕರಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಸಂತ್ರಸ್ತೆ ದೂರಿನ ಆಧಾರದ ಮೇಲೆ ಆ.11ರಂದು ಆಶಿಶ್, ಆತನ ಸ್ನೇಹಿತ, ಸ್ನೇಹಿತನ ಪತ್ನಿ ಹಾಗೂ ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆಶಿಶ್ ಮತ್ತು ಆತನ ಸ್ನೇಹಿತ ಅತ್ಯಾಚಾರ ಎಸಗಿದ್ದು, ಓರ್ವ ಮಹಿಳೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆ.18ರಂದು ಸಂತ್ರಸ್ತೆ ಮತ್ತೊಂದು ಹೇಳಿಕೆ ನೀಡಿದ್ದರು. ಅದಾದ ಬಳಿಕ ಆ.21ರಂದು ಆಶಿಶ್ ಸ್ನೇಹಿತ ಹಾಗೂ ಆತನ ಪತ್ನಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

ತನಿಖೆ ನಡೆಯುತ್ತಿದ್ದು, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿಕೊಂಡಿದ್ದೇವೆ. ಇವುಗಳ ಆಧಾರದ ಮೇಲೆ ಸಂತ್ರಸ್ತೆ ಹಾಗೂ ಕಪೂರ್ ಪಾರ್ಟಿ ನಡೆದ ದಿನ ವಾಶ್‌ರೂಮ್‌ಗೆ ಪ್ರವೇಶಿಸಿದ್ದಾರೆ. ಇವರಿಬ್ಬರು ಕೆಲಕಾಲ ಹೊರಗೆ ಬರದಿದ್ದಾಗ ಅವರ ಸ್ನೇಹಿತರು ಬಾಗಿಲು ಬಡಿದಿದ್ದರು. ಈಗ ನಟ ಆಶಿಶ್ ಕಪೂರ್‌ನ್ನು ಬಂಧಿಸಿ, ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ.