ಮೈಸೂರು : ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ತೃತೀಯ ಭಾಷೆಯನ್ನು ಕಡ್ಡಾಯವಲ್ಲ ಎಂದು ಘೋಷಿಸಿದೆ. ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹಿಂದಿ ಕಲಿಯಬಾರದು ಎಂದು ಹೇಳುತ್ತಿಲ್ಲ. ಕಡ್ಡಾಯ ಬೇಡ ಎಂದು ಹೇಳುತ್ತಿದ್ದೇನೆ. ಸುಮ್ಮನೆ ಹಿಂದಿ ಹೇರಿಕೆಯಾಗಬಾರದು ಎಂದಿದ್ದಾರೆ.
ವಿರೋಧ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರವನ್ನ ಎಲ್ಲರೂ ಒಪ್ಪಿಕೊಳ್ಳಬೇಕು. ಯಾರೋ ಕೆಲವರು ವಿರೋಧಿಸಿದರೆ ಹಿಂದೆ ಸರಿಯಲ್ಲ. ಎಲ್ಲ ರೀತಿ ಪರಾಮರ್ಶಿಸಿ ಸರ್ಕಾರ ನಿರ್ಧಾರ ಮಾಡಿದೆ. ಎಲ್ಲರೂ ಈ ನಿರ್ಧಾರವನ್ನು ಒಪ್ಪಿಕೊಳ್ಳಬೇಕು. ಈ ವರ್ಷದಿಂದಲೇ ಪರೀಕ್ಷೆಯಲ್ಲಿ ಇದು ಜಾರಿ ಆಗುತ್ತೆ ಎಂದಿದ್ದಾರೆ.















