ರಾಯಚೂರು : ಜಿಲ್ಲೆಯಲ್ಲಿಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ.
ಇಂದು (ಮಂಗಳವಾರ) ಬೆಳಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ನೇತೃತ್ವದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಮೆರವಣಿಗೆ ಮಾರ್ಗದಲ್ಲಿ ಸಾವಿರಾರು ಪೊಲೀಸರಿಂದ ಕಾಲ್ನಡಿಗೆ ಜಾಥಾ ನಡೆಯಿತು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಜಾಗೃತಿ ಜಾಥಾ ನಡೆಸಿದರು.
ಗಣೇಶ ಮೆರವಣಿಗೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಒಂದು ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯ ನಿಯೋಜನೆ ಮಾಡಲಾಗಿದೆ.
ಸಂಜೆ ಗಣೇಶ ಮೆರವಣಿಗೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ. ಇದೇ ವೇಳೆ ನಗರದ ಚಂದ್ರಮೌಳೇಶ್ವರ ವೃತ್ತದಲ್ಲಿ ಯತ್ನಾಳ್ ಭಾಷಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.














