ಮನೆ ರಾಜ್ಯ ಪ್ರವೀಣ್‌ ನೆಟ್ಟಾರು ಮೃತದೇಹ ಮೆರವಣಿಗೆ: ಮೂರು ತಾಲೂಕುಗಳ ಬಂದ್‌ ಗೆ ಹಿಂದೂ ಸಂಘಟನೆಗಳ ಕರೆ

ಪ್ರವೀಣ್‌ ನೆಟ್ಟಾರು ಮೃತದೇಹ ಮೆರವಣಿಗೆ: ಮೂರು ತಾಲೂಕುಗಳ ಬಂದ್‌ ಗೆ ಹಿಂದೂ ಸಂಘಟನೆಗಳ ಕರೆ

0

ಸುಳ್ಯ (Sulya): ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ಕೊಲೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೃತದೇಹದ ಮೆರವಣಿಗೆ ನಡೆಸಲು ಸಂಘ ಪರಿವಾರದ ಸಂಘಟನೆಗಳು ಹಾಗೂ ಪ್ರವೀಣ್ ಅವರ ಬಂಧುಗಳು ನಿರ್ಧರಿಸಿದ್ದಾರೆ.

ಇಂದು ಬೆಳಿಗ್ಗೆ 9.30 ಕ್ಕೆ ಪುತ್ತೂರು ನಗರದಿಂದ ಮೆರವಣಿಗೆಯಲ್ಲಿ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ‌ ಪ್ರವೀಣ್ ಅವರ ಮೃತದೇಹವನ್ನು ಕೊಂಡೊಯ್ಯಲಾಗುತ್ತದೆ.

ಹೀಗಾಗಿ ಇಂದು ದಕ್ಷಿಣ ಕನ್ನಡ‌ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ ತಾಲ್ಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ವಾಹನ ಸಂಚಾರ ನಿಲ್ಲಿಸಿ ಬಂದ್ ನಡೆಸಬೇಕೆಂದು ಹಿಂದೂ ಸಂಘಟನೆಗಳ ಪ್ರಮುಖರು ಕರೆ ನೀಡಿದ್ದಾರೆ.

ಬೆಳ್ಳಾರೆಯ ಹಿಂದುತ್ವಪರ ಸಂಘಟನೆಗಳ ಮುಖಂಡ, ಬಿಜೆಪಿ ಜಿಲ್ಲಾ ಯುವಮೋರ್ಚಾದ ಸದಸ್ಯ ಪ್ರವೀಣ್ ನೆಟ್ಟಾರು(32) ಅವರನ್ನು ಮಂಗಳವಾರ ರಾತ್ರಿ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳು ತಲವಾರಿನಿಂದ ಕಡಿದು ಬರ್ಬರವಾಗಿ ಕೊಲೆಗೈದಿದ್ದಾರೆ.  ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳಾರೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದ ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಿಂದಿನ ಲೇಖನಬಿಜೆಪಿ ಕಾರ್ಯಕರ್ತನ ಹತ್ಯೆ: ಶೀಘ್ರವೇ ದುಷ್ಕರ್ಮಿಗಳ ಬಂಧನ; ಸಿಎಂ ಬಸವರಾಜ ಬೊಮ್ಮಾಯಿ
ಮುಂದಿನ ಲೇಖನಇಂದಿನ ದಿನದ ಚಿನ್ನ-ಬೆಳ್ಳಿ ದರದ ವಿವರ