ಬೆಂಗಳೂರು: ಹಿಟ್ ಆ್ಯಂಡ್ ರನ್ ಗೆ ಇಬ್ಬರು ಬೈಕ್ ಸವಾರರು ಬಲಿಯಾಗಿರುವ ಘಟನೆ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ನಡೆದಿದೆ.
ಮೃತರಲ್ಲಿ ಓರ್ವನನ್ನು ಮಂಗಮ್ಮನಪಾಳ್ಯ ವಾಸಿ ಮಂಜಪ್ಪ(32) ಎಂದು ಗುರುತಿಸಲಾಗಿದ್ದು, ಮತ್ತೋರ್ವನ ಗುರುತು ಪತ್ತೆಯಾಗಿಲ್ಲ.
ಇವರಿಬ್ಬರು ಬೈಕ್ ಮೇಲೆ ತೆರಳುವಾಗ ಹಿಂಬದಿಯಿಂದ ಬಂದ ಅಪರಿಚಿತ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ಇಬ್ಬರು ಕೊನೆಯುಸಿರೆಳೆದಿದ್ದಾರೆ.
ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
Saval TV on YouTube