ಬೆಂಗಳೂರು: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳು ಮತ್ತೆ ಒಂದಷ್ಟು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ, ಮತ್ತೊಂದು ಭೀಕರ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದ ಬೈಪಾಸ್ ರಸ್ತೆಯಲ್ಲಿ, ಅಪರಿಚಿತ ವಾಹನದ ಡಿಕ್ಕಿಯಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಘಟನೆ ವಿಜಯಪುರದ ಸಿಲ್ಕ್ ಫ್ಯಾಕ್ಟರಿ ಸಮೀಪದಲ್ಲಿ ಇಂದು ಮುಂಜಾನೆ ಸಂಭವಿಸಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮತ್ತು ಪುರುಷ ಇಬ್ಬರೂ ಅಪರಿಚಿತ ವಾಹನ ಡಿಕ್ಕಿಯಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಮಾಡಿದ ವಾಹನ ಸ್ಥಳದಿಂದ ಪರಾರಿಯಾಗಿದ್ದು, ಇದು ಹಿಟ್ ಅಂಡ್ ರನ್ ಪ್ರಕರಣ ಎಂದು ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ಕ್ಯಾಂಪೆರಾಗಳ ಪರಿಶೀಲನೆ ಮೂಲಕ ಅಪರಿಚಿತ ವಾಹನದ ಪತ್ತೆ ಹಚ್ಚುವ ಕಾರ್ಯಕ್ಕೆ ಕೈಹಾಕಿದ್ದಾರೆ.















