ಮನೆ ಅಪರಾಧ ಹಿಟ್‌ ಅಂಡ್‌ ರನ್‌: ಓರ್ವ ವ್ಯಕ್ತಿ ಸಾವು, ನಾಲ್ವರಿಗೆ ಗಾಯ

ಹಿಟ್‌ ಅಂಡ್‌ ರನ್‌: ಓರ್ವ ವ್ಯಕ್ತಿ ಸಾವು, ನಾಲ್ವರಿಗೆ ಗಾಯ

0

ರಾಯ್‌ಬರೇಲಿ: ಉತ್ತರ ಪ್ರದೇಶದ ರಾಯ್‌ ಬರೇಲಿ-ಪ್ರಯಾಗರಾಜ್‌ ಹೆದ್ದಾರಿಯಲ್ಲಿ ಸಂಭವಿಸಿದ ಹಿಟ್‌ ಅಂಡ್‌ ರನ್‌ ಪ್ರಕರಣದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಬಿಜೆಪಿ ರಾಜ್ಯ ಕಾರ್ಯದರ್ಶಿ ಅಭಿಜತ್‌ ಮಿಶ್ರಾ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Our Whatsapp Group

ಬುಧವಾರ ರಾತ್ರಿ ಪ್ರಗತಿಪುರಂ ಬಳಿ ವೇಗವಾಗಿ ಬಂದ ಕಾರು, ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಸ್ಥಳೀಯರು ಕಾರನ್ನು ತಡೆಯಲು ಪ್ರಯತ್ನಿಸಿದ್ದಾರಾದರೂ ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ 67 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬಿಜೆಪಿ ರಾಜ್ಯ ಕಾರ್ಯದರ್ಶಿ ಅಭಿಜತ್‌ ಮಿಶ್ರಾ ಮತ್ತು ಅವರ ಸಹಚರ ಭಾನು ತಿವಾರಿ ಸೇರಿದಂತೆ ಗಾಯಗೊಂಡಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಚಾಲಕನನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ರಾಜೀವ್ ಸಿಂಗ್ ತಿಳಿಸಿದ್ದಾರೆ.