ಮನೆ ಅಪರಾಧ ನಕಲಿ ಕೀ ಬಳಸಿ ಮನೆಯಲ್ಲಿ ಚಿನ್ನಾಭರಣ ಕಳವು: ಆರೋಪಿ ಬಂಧನ

ನಕಲಿ ಕೀ ಬಳಸಿ ಮನೆಯಲ್ಲಿ ಚಿನ್ನಾಭರಣ ಕಳವು: ಆರೋಪಿ ಬಂಧನ

0

ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಗಳಲ್ಲಿ ನಕಲಿ ಕೀ ಬಳಸಿ ಚಿನ್ನಾಭರಣ ಹಾಗೂ ನಗದು ಕಳವು ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಪ್ರಕಾಶ್‌ (44) ಬಂಧಿತ ಆರೋಪಿ.

ಡ್ರಾಯರ್‌ನಲ್ಲಿ ಇಡಲಾಗಿದ್ದ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ಮನೆ ಮಾಲೀಕ ದೂರು ನೀಡಿದ್ದರು. ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 422 ಗ್ರಾಂ ಚಿನ್ನಾಭರಣ ಹಾಗೂ ಒಂದು ಬೈಕ್‌ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿ ಬಂಧನದಿಂದ ಬೇಗೂರು, ಚಂದ್ರಾಲೇಔಟ್‌, ಎಚ್‌ಎಸ್‌ಆರ್‌ ಲೇಔಟ್‌, ಹುಳಿಮಾವು, ಕುಮಾರಸ್ವಾಮಿ ಲೇಔಟ್‌ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ್ದ ಆರು ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಿದರು.

ಹಿಂದಿನ ಲೇಖನನಟಿ ಛಾಯಾಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಕೆಲಸದಾಕೆ ಬಂಧನ
ಮುಂದಿನ ಲೇಖನಬಸ್ – ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು