ಮನೆ ರಾಜ್ಯ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಸ್ಥಳಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಭೇಟಿ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಸ್ಥಳಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಭೇಟಿ

0

ಬೆಂಗಳೂರು: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದ ದುರಂತ ಸ್ಥಳಕ್ಕೆ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿನ್ನೆ ಸಂಭವಿಸಿದ ದುರಂತದ ನಂತರ ಇಂದು ಬೆಳಿಗ್ಗೆ ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದರು. ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದು, ಜನಸಂದಣಿಯ ನಿರ್ವಹಣೆ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್, “ಆರ್‌ಸಿಬಿ ತಂಡವು ತಮ್ಮ ವಿಜಯೋತ್ಸವವನ್ನು ಬೆಂಗಳೂರಿನಲ್ಲಿ ಆಚರಿಸಲು ನಿರ್ಧರಿಸಿತ್ತು. ಈ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ವಿನಂತಿಸಿರಲಿಲ್ಲ. ಆದರೆ ಅವರನ್ನು ಕರೆತಂದು ಸಾರ್ವಜನಿಕ ಸಮಾರಂಭ ಆಯೋಜಿಸಲಾಗಿತ್ತು. ಜನಸಂದಣಿಯ ನಿರ್ವಹಣೆ ಸರ್ಕಾರದ ಜವಾಬ್ದಾರಿ ಎಂಬ ದೃಷ್ಟಿಕೋನದಿಂದ ನಾವು ಸಹಕಾರ ನೀಡಿದ್ದೆವು” ಎಂದು ಅವರು ಸ್ಪಷ್ಟಪಡಿಸಿದರು. ಘಟನೆಯ ಪ್ರಾಮಾಣಿಕ ತನಿಖೆಗೆ ಸರ್ಕಾರ ಬದ್ಧವಾಗಿದೆ ಎಂದೂ ಭರವಸೆ ನೀಡಿದರು.

ಈ ನಡುವೆ ದುರಂತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿರುವುದು, ಹಾಗೂ ಸ್ನೇಹಮಯಿ ಕೃಷ್ಣ ಸೇರಿದಂತೆ ಹಲವರಿಂದ ದಾಖಲಾಗಿರುವ ದೂರುಗಳು, ಸರ್ಕಾರದ ಮೇಲೆ ಹೆಚ್ಚು ಒತ್ತಡ ತಂದಿವೆ.