ಮನೆ ಅಪರಾಧ ದಾವಣಗೆರೆಯಲ್ಲಿ ಹನಿಟ್ರ್ಯಾಪ್ ಗ್ಯಾಂಗ್; ಐವರ ಬಂಧನ..!

ದಾವಣಗೆರೆಯಲ್ಲಿ ಹನಿಟ್ರ್ಯಾಪ್ ಗ್ಯಾಂಗ್; ಐವರ ಬಂಧನ..!

0

ದಾವಣಗೆರೆ : ದಾವಣಗೆರೆಯಲ್ಲಿ ಸ್ಥಿತಿವಂತ ಯುವಕರನ್ನು ಟಾರ್ಗೆಟ್ ಮಾಡಿ ಬಲೆಗೆ ಬೀಳಿಸುತ್ತಿದ್ದ ಖತರ್ನಾಕ್ ಹನಿಟ್ರ್ಯಾಪ್ ಗ್ಯಾಂಗ್‌ನ ಇಬ್ಬರು ಯುವತಿಯರು ಸೇರಿದಂತೆ ಐವರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ ₹10.20 ಲಕ್ಷ ಮೌಲ್ಯದ ಚಿನ್ನ ಹಾಗೂ ಇನೋವಾ ಕಾರನ್ನು ಜಪ್ತಿ ಮಾಡಲಾಗಿದೆ. ಯುವತಿಯರ ಮೂಲಕ ಯುವಕರನ್ನು ನಿರ್ಜನ ಪ್ರದೇಶಕ್ಕೆ ಕರೆಸಿ, ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದ ಈ ಗ್ಯಾಂಗ್‌ನ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.