ಮೈಸೂರು ಹೂಟಗಳ್ಳಿಯ ರೋಟರಿ ಮಿಡ್‌ಟೌನ್ ಅಕಾಡೆಮಿಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಹೊಸ ಶೈಕ್ಷಣಿಕ ವರ್ಷದ ಆರಂಭದ ಅಂಗವಾಗಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ತಿಲಕವಿಟ್ಟು, ಹೂವುಗಳನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಎನ್ನಲಾಗಿದೆ.

ಇದರ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಮುಖ್ಯಸ್ಥ ಪಿ. ಪ್ರಶಾಂತ್ ಅವರು ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಶಿಕ್ಷಣದಲ್ಲಿ ಸಾಧನೆ ಮಾಡಬೇಕು ಎಂದು ತಿಳಿಸಿದರು. ಶಾಲೆಯ ಅಧ್ಯಕ್ಷ ಎನ್. ನರೇಂದ್ರ ಬಾಬು ಅವರು ಮಕ್ಕಳಿಗೆ ಶುಭ ಹಾರೈಸಿ, ಗುಣಮಟ್ಟದ ಶಿಕ್ಷಣ ನೀಡಲು ಸಂಸ್ಥೆ ಬದ್ಧವಾಗಿದೆ ಎಂದು ಹೇಳಿದರು.

ಹಾಗೂ ಕಾರ್ಯಕ್ರಮದಲ್ಲಿ ಖಜಾಂಚಿ ಪವಿತ್ರನ್, ಪ್ರಾಂಶುಪಾಲ ಆತ್ಮಾನಂದ, ಮುಖ್ಯಶಿಕ್ಷಕಿ ಸಾರಲಿ ಹಾಗೂ ನಿವೇದಾ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ವರ್ಷದ ಶುಭಾಶಯಗಳನ್ನು ಕೋರಿದರು. ಶಾಲಾ ಸಿಬ್ಬಂದಿ ಹಾಗೂ ಪೋಷಕರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮವನ್ನು ಹಂಚಿಕೊಂಡರು. ಹೊಸ ವರ್ಷದ ಮೊದಲ ದಿನವೇ ಶಾಲಾ ಆವರಣದಲ್ಲಿ ಹರ್ಷೋಲ್ಲಾಸದ ವಾತಾವರಣ ನಿರ್ಮಾಣವಾಗಿತ್ತು ಎಂಬುದ್ದಾಗಿದೆ.
















