ಮನೆ ಮನರಂಜನೆ ಜುಲೈ 8ಕ್ಕೆ ಹೋಪ್‌ ಸಿನಿಮಾ ತೆರೆಗೆ

ಜುಲೈ 8ಕ್ಕೆ ಹೋಪ್‌ ಸಿನಿಮಾ ತೆರೆಗೆ

0

ಬೆಂಗಳೂರು (Bengaluru): ಟ್ರೇಲರ್ ಮೂಲಕವೇ ಕುತೂಹಲ ಮೂಡಿಸಿರುವ ‘ಹೋಪ್‌ʼ ಸಿನಿಮಾ ಜುಲೈ 8ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ನಟನೆಯಿಂದ ಒಂದಷ್ಟು ಅಂತರ ತೆಗೆದುಕೊಂಡಿದ್ದ ಶ್ವೇತಾ ಶ್ರೀವಾಸ್ತವ್ ‘ಹೋಪ್’ ಮೂಲಕ ಮತ್ತೆ ಬಣ್ಣ ಹಚ್ಚಿದ್ದಾರೆ.

‘ಜ್ವಲಂತಂ’ ಸಿನಿಮಾ ನಿರ್ದೇಶಿಸಿದ ಅಂಬರೀಶ್ ಬಿ.ಎಂ. ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್ ಹೇಳಿದ್ದು, ಪ್ರಾಮಾಣಿಕ ಅಧಿಕಾರಿಯ ವರ್ಗಾವಣೆ, ಅದರ ಸುತ್ತ ನಡೆಯುವ ರಾಜಕೀಯ ಆಟ, ಕಾನೂನು ಹೋರಾಟದ ಕಥಾಹಂದರವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ಕೆಎಎಸ್ ಅಧಿಕಾರಿ ವರ್ಗಾವಣೆ ಜನ ಸಾಮಾನ್ಯರ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತದೆ ಎಂಬ ಕಥಾವಸ್ತುವನ್ನು ಇಟ್ಕೊಂಡು ಸಿನಿಮಾ ಮಾಡಲಾಗಿದೆ.

ಸುಮಲತಾ ಅಂಬರೀಷ್, ಪ್ರಮೋದ್ ಶೆಟ್ಟಿ, ಗೋಪಾಲ ಪಾಂಡೆ, ಪ್ರಕಾಶ್ ಬೆಳವಾಡಿ, ಸಿರಿ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ. ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್ ‘ಹೋಪ್’ ಸಿನಿಮಾಗೆ ಕಥೆ ಬರೆದು ನಿರ್ಮಾಣ ಮಾಡಿದ್ದಾರೆ. ಎಸ್.ಹಾಲೇಶ್ ಛಾಯಾಗ್ರಹಣ ಮಾಡಿದ್ದಾರೆ. ರಿತ್ವಿಕ್ ಮುರಳೀಧರ್ ಸಂಗೀತ ನೀಡಿದ್ದಾರೆ.

ಹಿಂದಿನ ಲೇಖನಹಿಂದೆ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರ, ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರ: ಸಿಎಂ ಬೊಮ್ಮಾಯಿ
ಮುಂದಿನ ಲೇಖನಸ್ವಗ್ರಾಮದಲ್ಲಿ ವಾಸ್ತು ತಜ್ಞ ಚಂದ್ರಶೇಖರ್‌ ಗುರೂಜಿ ಅಂತ್ಯಕ್ರಿಯೆ