ರಾಜಸ್ಥಾನ: ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಮಂಗಳವಾರ ಕಾರೊಂದು ಡಿವೈಡರ್ ಜಿಗಿದು ಎದುರಿನಿಂದ ಬರುತ್ತಿದ್ದ ಟ್ರಕ್ ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಮೃತರನ್ನು ರಾಧೇಶ್ಯಾಮ್, ಅವರ ಪತ್ನಿ ಶಕುಂತಲಾ, ಅವರ ಮಗ ಮನೀಶ್ ಮತ್ತು ಅವರ ಪುತ್ರಿ ಯಶಿಕಾ ಎಂದು ಗುರುತಿಸಲಾಗಿದೆ.
ಕುಟುಂಬವೊಂದು ಕಾರಿನಲ್ಲಿ ಅಜ್ಮೀರ್ ನಿಂದ ಉದಯಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಉದಯಪುರಕ್ಕೆ ತೆರಳುತ್ತಿದ್ದ ವೇಳೆ ಭಿಲ್ವಾರಾ ಜಿಲ್ಲೆ ಪ್ರವೇಶಿಸುತ್ತಿದ್ದಂತೆ ಏಕಾಏಕಿ ಕಾರಿನ ಚಕ್ರ ಸಿಡಿದು ನಿಯಂತ್ರಣ ಕಳೆದುಕೊಂಡು ಡಿವೈಡರ್ ಜಿಗಿದು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಘಟನೆ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ ಕಾರು ಚಾಲಕ ಮತ್ತು ಓರ್ವ ಬಾಲಕಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
Saval TV on YouTube