Saval TV on YouTube
ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಭ್ ಪಂತ್ ಇಂದು ಬೆಳಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ತಲೆ ಮತ್ತು ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆನ್ನಿಗೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ.
ರಿಷಭ್ ಪಂತ್ ಶುಕ್ರವಾರ ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಹಮ್ಮದ್’ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಪಂತ್ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಅಪಘಾತದ ಬಳಿಕ ತೆಗೆಯಲಾದ ಚಿತ್ರದಲ್ಲಿ ಪಂತ್ ಅವರಿದ್ದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವ ಸ್ಥಿತಿಯಲ್ಲಿದೆ. ಪಂತ್ ಅವರ ತಲೆಗೆ ಬ್ಯಾಂಡೇಜ್ ಹಾಕಲಾದ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದೆ.