ಚಿತ್ರದುರ್ಗ: ಲಾರಿ, ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಮತ್ತೆ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಶನಿವಾರ ಸಂಭವಿಸಿದೆ.
ಚಿತ್ರದುರ್ಗದಿಂದ ದಾವಣಗೆರೆ ಕಡೆ ಪ್ರಯಾಣ ಮಾಡುತ್ತಿದ್ದ ಕಾರು ಮತ್ತು ಲಾರಿ ಈ ವೇಳೆ ಲಾರಿಯ ಟಯರ್ ಸ್ಫೋಟಗೊಂಡಿದೆ ಪರಿಣಾಮ ಹಿಂದಿನಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೆ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಮೃತರ ಗುರುತು ಇನ್ನೂ ಕೂಡಾ ಪತ್ತೆಯಾಗಿಲ್ಲ. ಸ್ಥಳಕ್ಕೆ ಭರಮಸಾಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.














