ಮನೆ ಅಪರಾಧ ಭೀಕರ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರು ಸಾವು

ಭೀಕರ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರು ಸಾವು

0

ದೇವಾಸ್: ಮನೆಯೊಂದರಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಪ್ರದೇಶದ ದೇವಾಸ್ ನಗರದ ನಯಾಪುರ ಪ್ರದೇಶದಲ್ಲಿ ನಡೆದಿದೆ.

Join Our Whatsapp Group

ಈ ದುರಂತದಲ್ಲಿ ನಿವಾಸಿಗಳಾದ ದಿನೇಶ್ ಕಾರ್ಪೆಂಟರ್ (35), ಗಾಯತ್ರಿ ಕಾರ್ಪೆಂಟರ್ (30), ಇಶಿಕಾ (10) ಮತ್ತು ಚಿರಾಗ್ (7) ಸಾವನ್ನಪ್ಪಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ದೊರೆತ ತಕ್ಷಣ ದೇವಾಸ್ ಮುನ್ಸಿಪಲ್ ಕಾರ್ಪೊರೇಷನ್‌ ನ ಅಗ್ನಿಶಾಮಕ ದಳದ ಮೂರು ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಇಲ್ಲಿ ವಾಸಿಸುತ್ತಿದ್ದ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ನಯಾಪುರ ಪ್ರದೇಶದ ಮೂರು ಅಂತಸ್ತಿನ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ವಲ್ಪ ಸಮಯದೊಳಗೆ ಬೆಂಕಿ ದೊಡ್ಡ ಸ್ವರೂಪವನ್ನು ಪಡೆದುಕೊಂಡಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಮನೆಯಲ್ಲಿ ಇರಿಸಲಾಗಿದ್ದ ಸಿಲಿಂಡರ್ ಕೂಡ ಸ್ಫೋಟಗೊಂಡಿದೆ. ಸ್ಫೋಟದ ಸದ್ದು ಇಡೀ ಪ್ರದೇಶಕ್ಕೆ ಪ್ರತಿಧ್ವನಿಸಿದೆ. ಸ್ಫೋಟದ ಸದ್ದಿನಿಂದ ಅಕ್ಕಪಕ್ಕದವರು ಎಚ್ಚೆತ್ತುಕೊಂಡು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. 3 ಗಂಟೆಗಳ ಪ್ರಯತ್ನದ ಬಳಿಕ ಬೆಂಕಿಯನ್ನು ಹತೋಟಿಗೆ ತರಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಜಿಲ್ಲಾಡಳಿತ ತಂಡಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಡ್ ಸ್ಥಳಕ್ಕೆ ಧಾವಿಸಿದರು. ಬೆಂಕಿಯನ್ನು ನಿಯಂತ್ರಿಸಿದ ನಂತರ, ರಕ್ಷಣಾ ತಂಡಗಳು ಒಳಗೆ ಹೋಗಿ ನೋಡಿದಾಗ ದಿನೇಶ್ ಕಾರ್ಪೆಂಟರ್ ಅವರ ಇಡೀ ಕುಟುಂಬ ಸುಟ್ಟು ಭಸ್ಮವಾಗಿರುವುದು ಗೊತ್ತಾಗಿದೆ.