ಮನೆ ಅಪರಾಧ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಗೂಡ್ಸ್ ವಾಹನ ಕಾರಿಗೆ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ...

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಗೂಡ್ಸ್ ವಾಹನ ಕಾರಿಗೆ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು

0

ಬೆಂಗಳೂರು: ನಗರದಲ್ಲಿ ಮತ್ತೆ ಒಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಈ ದುರ್ಘಟನೆ ಬೆಂಗಳೂರು ನಗರ ಮಧ್ಯಭಾಗದಲ್ಲಿರುವ ಮೆಯೋಹಾಲ್ ಜಂಕ್ಷನ್ ಬಳಿ ಸಂಭವಿಸಿದೆ.

ಸಾಕಷ್ಟು ವಾಹನಗಳ ಸಂಚಾರವಾಗುವ ಈ ಜಂಕ್ಷನ್‌ನಲ್ಲಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಅಘಾತದಿಂದಾಗಿ ಕಾರು ಮುಂದೆ ನಿಂತಿದ್ದ ಬೈಕ್‌ಗೆ ಡಿಕ್ಕಿಯಾಗಿ, ಬೈಕ್‌ನಲ್ಲಿದ್ದ ಮಹಿಳೆ ರಸ್ತೆಗೆ ಬಿದ್ದಿದ್ದಾರೆ. ಈ ಹೊತ್ತಲ್ಲೇ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಅಂಜಲಿ (36) ಎಂದು ಗುರುತಿಸಲಾಗಿದ್ದು, ಅಪಘಾತದ ಪರಿಣಾಮ ವಿಜಯ್ ಕುಮಾರ್ ಕೂಡ ಗಂಭೀರ ಗಾಯಗಳೊಂದಿಗೆ ಬಿದ್ದಿದ್ದು, ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಕುರಿತು ಸ್ಥಳಕ್ಕೆ ತಕ್ಷಣವೇ ಆಗಮಿಸಿದ ಅಶೋಕನಗರ ಸಂಚಾರಿ ಪೊಲೀಸ್ ಇಲಾಖೆ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದೆ. ಅಪಘಾತಕ್ಕೆ ಕಾರಣವಾದ ವಾಹನ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗೂಡ್ಸ್ ವಾಹನದ ಚಾಲಕ ವೇಗ ಹಾಗೂ ನಿರ್ಲಕ್ಷ್ಯದೊಂದಿಗೆ ವಾಹನ ಚಲಾಯಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ತಲೆಮರೆಸಿಕೊಂಡಿರುವ ಗೂಡ್ಸ್ ವಾಹನದ ಚಾಲಕನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.