ವಿಜಯನಗರ: ಕಲುಷಿತ ನೀರು ಸೇವಿಸಿ ಹೊಸಪೇಟೆ ತಾಲೂಕಿನ ನಲ್ಲಾಪುರದ 18 ಜನರು ಅಸ್ವಸ್ಥಗೊಂಡಿದ್ದಾರೆ.
ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಉಳಿದವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ಪೈಪ್ಲೈನ್ ಮೂಲಕ ಕಲುಷಿತ ನೀರು ಪೂರೈಕೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮಕ್ಕೆ ಜಿಲ್ಲಾ ಪಂಚಾಯತ್ ಸಿಇಒ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಶಂಕರ್ ನಾಯ್ಕ್ ಭೇಟಿ ನೀಡಿ, ನೀರಿನ ಸ್ಯಾಂಪಲ್ ಪಡೆದು ಪರಿಶೀಲನೆಗೆ ಕಳುಹಿಸಿದರು.