ಹೊಸಪೇಟೆ: ಖಾಸಗಿ ಬಸ್ ಉರುಳಿ ಬಿದ್ದು 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಎಂ.ಬಿ.ಅಯ್ಯನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ಬಳಿ ಸೆ.26ರ ಮಂಗಳವಾರ ನಡೆದಿದೆ.
ಬೆಂಗಳೂರು ಮೂಲಕ ಕಲ್ಬುರ್ಗಿ ಕಡೆ ಪ್ರಯಾಣ ಬೆಳೆಸಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಈ ಪರಿಣಾಮ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಚಾಲಕ ಸ್ಥಿತಿ ಗಂಭೀರವಾಗಿದೆ.
ಕಾನಾಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.














