ಹೊಸಪೇಟೆ (ವಿಜಯನಗರ): ನಗರದ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿರುವ 405 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ತ್ರಿವರ್ಣ ಧ್ವಜ ಹರಿದ ಸ್ಥಿತಿಯಲ್ಲಿ ಹಾರಾಡುತ್ತಿದೆ.
ಗುರುವಾರದಿಂದ ಧ್ವಜ ಹರಿದ ಸ್ಥಿತಿಯಲ್ಲೇ ಹಾರಾಡುತ್ತಿದೆ. ಆದರೆ, ಅಧಿಕಾರಿಗಳು ಅದನ್ನು ಕೆಳಗಿಳಿಸಿಲ್ಲ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುತ್ತಿರುವುದು ಸರಿಯಲ್ಲ. ಕೂಡಲೇ ಕೆಳಗಿಳಿಸಿ ಬೇರೆ ಧ್ವಜ ಹಾರಿಸಬೇಕೆಂದು ವಿಜಯನಗರ ಜಿಲ್ಲಾ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಸಂಘಧ ಅಧ್ಯಕ್ಷ ಸೋಮಶೇಖರ್ ಬಣ್ಣದಮನೆ ಆಗ್ರಹಿಸಿದ್ದಾರೆ.
ಪರಿಶೀಲಿಸಿ ಸರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.