ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಜೆ ನಗರದಲ್ಲಿ ಕಳೆದ ರಾತ್ರಿ ಮಳೆಯಿಂದಾಗಿ ಸುಮಾರು 70 ವರ್ಷದ ಹಳೆಯ ಮನೆಯೊಂದು ಕುಸಿದು ಬಿದ್ದಿದ್ದು, ವೃದ್ಧ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಮನೆಯಲ್ಲಿ ವೃದ್ಧ ದಂಪತಿ ವಾಸವಾಗಿದ್ದರು. ಜಿಟಿ ಜಿಟ ಮಳೆಗೆ ಮನೆ ಕುಸಿದಿದ್ದು, ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಅಬ್ಬರ ರಾಜ್ಯದ ಮೇಲೂ ಪರಿಣಾಮ ಬೀರಿದೆ. ಬೆಂಗಳೂರು, ರಾಮನಗರ, ಮೈಸೂರು, ಚಾಮರಾಜನರ, ಮಂಡ್ಯ ಸೇರಿದಂತೆ ಹಲವೆಡೆ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಡಿಸೆಂಬರ್ 3ರಂದು ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.