ಮನೆ ಅಪರಾಧ ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಗೃಹಿಣಿ ಮಕ್ಕಳೊಂದಿಗೆ ನೇಣಿಗೆ ಶರಣು

ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಗೃಹಿಣಿ ಮಕ್ಕಳೊಂದಿಗೆ ನೇಣಿಗೆ ಶರಣು

0

ಮೈಸೂರು(Mysuru) : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಗೃಹಿಣಿ, ತನ್ನೆರಡು ಮಕ್ಕಳಿಗೆ ನೇಣು ಬಿಗಿದು ತಾನು ನೇಣಿಗೆ ಶರಣಾಗಿರುವ ಘಟನೆ ತಿ.ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸರೋಜಾ (32), ಆಕೆಯ ಇಬ್ಬರು ಮಕ್ಕಳಾದ ಗೀತಾ(6), ಕುಸುಮಾಗೂ (4) ಮೃತರು.

ತಿ‌.ನರಸೀಪುರ ತಾಲೂಕಿನ ಮಾವಿನಹಳ್ಳಿ ಗ್ರಾಮದ ನಿಂಗರಾಜು ಎಂಬುವರನ್ನು ಸರೋಜಾ ವಿವಾಹವಾಗಿದ್ದರು. ಗಂಡ ನಿಂಗರಾಜುಗೆ ಅಕ್ರಮ ಸಂಬಂಧ ಇರುವ ವಿಷಯಕ್ಕೆ ಪದೇ ಪದೆ ಗಲಾಟೆ ನಡೆಯುತ್ತಿತ್ತು  ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ದಿನಗಳ ಹಿಂದೆ ಗಂಡನ ಮನೆಯಿಂದ ಸ್ವಗ್ರಾಮ ರಾಮೇಗೌಡನಪುರ ಆಗಮಿಸಿದ್ದ ಸರೋಜಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ.

ಸದ್ಯ ಮೃತ ದೇಹಗಳನ್ನು ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.