ಮನೆ ರಾಷ್ಟ್ರೀಯ ಆಹ್ವಾನ ಇಲ್ಲದೆ ಜಿ20 ಸಭೆಗೆ ನಾನು ಹೇಗೆ ಹೋಗಲಿ: ಮಲ್ಲಿಕಾರ್ಜುನ ಖರ್ಗೆ

ಆಹ್ವಾನ ಇಲ್ಲದೆ ಜಿ20 ಸಭೆಗೆ ನಾನು ಹೇಗೆ ಹೋಗಲಿ: ಮಲ್ಲಿಕಾರ್ಜುನ ಖರ್ಗೆ

0

ಕಲಬುರಗಿ: ಆಹ್ವಾನ ಇಲ್ಲದೆ ಜಿ20 ಸಭೆಗೆ ನಾನು ಹೇಗೆ ಹೋಗಲಿ ಎಂದಿದ್ದಾರೆ. ಜಿ 20 ಸಭೆ ಸಮಾರಸ್ಯದ ಸಭೆ. ದೇಶದಲ್ಲಿ, ಪ್ರಪಂಚದಲ್ಲಿ ಗದ್ದಲ ಇಲ್ಲದೆ ಸಾಮರಸ್ಯದಿಂದ ಇರುವುದು ಒಳ್ಳೆಯದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ದೇಶವನ್ನು ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಸಾಧ್ಯತೆ ವಿಚಾರವಾಗಿ ಮಾತನಾಡಿದ ಖರ್ಗೆ, ಇಂಡಿಯಾ ಅಂದರೆ ಭಾರತ. ಅದು ದೇಶದ ಸಂವಿಧಾನದಲ್ಲೇ ಇದೆ. ಇದು ಯಾರು ಬೇಡ ಅಂದಿದ್ದಾರೋ ಗೊತ್ತಿಲ್ಲ. ದೇಶದ ಎಲ್ಲರೂ ಭಾರತ್ ಮಾತಾ ಕೀ ಜೈ ಎಂದು ಜೈಕಾರ ಹಾಕುತ್ತಾರೆ. ಸ್ಟಾರ್ಟಪ್ ಇಂಡಿಯಾ, ಡಿಜಿಟಲ್ ಇಂಡಿಯಾ ಅಂತಾ ಯಾಕೆ ಇಟ್ಟಿದ್ದಾರೆ. ದೇಶದಲ್ಲಿ ಭಾರತ್ ಜೋಡೋ ಅಂತಾ ನಾವೇ ಪ್ರಚಾರ ಮಾಡಿದ್ದೇವೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆಗೆ ಮತ್ತೆ ನಿಲುತ್ತಾರಾ ಇಲ್ಲವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಇಲ್ಲೇ ಇದ್ದೆ, ಇಲ್ಲಿಂದ ನನಗೆ ಅಲ್ಲಿಗೆ ಕಳುಹಿಸಿದಿರಿ. ಈಗ ದೆಹಲಿಯಲ್ಲಿ ನಿಶ್ಚಿಂತೆಯಿಂದ ಇದ್ದೇನೆ. ಇದೀಗ ಮತ್ತೆ ಬಾ ಅಂತೀರಾ ಎಂದರು.

ಹಿಂದಿನ ಲೇಖನಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಈ ಬಾರಿ 28 ಸ್ಥಾನ ಗೆಲ್ಲುತ್ತೇವೆ: ಕೆ.ಎಸ್ ಈಶ್ವರಪ್ಪ  
ಮುಂದಿನ ಲೇಖನಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ಕೋರಿದ್ದ ಪಿಐಎಲ್‌ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌