ಮನೆ ರಾಜ್ಯ ಮತವೇ ಇಲ್ಲದವರು ಬಹುಮತ ಗಳಿಸಲು ಹೇಗೆ ಸಾಧ್ಯ ?: ಬಿಜೆಪಿ

ಮತವೇ ಇಲ್ಲದವರು ಬಹುಮತ ಗಳಿಸಲು ಹೇಗೆ ಸಾಧ್ಯ ?: ಬಿಜೆಪಿ

0

ಬೆಂಗಳೂರು(Bengaluru): ಮತವೇ ಇಲ್ಲದವರು ಬಹುಮತ ಗಳಿಸಲು ಹೇಗೆ ಸಾಧ್ಯ? 2023 ರಲ್ಲಿ ಕಾಂಗ್ರೆಸ್ ಸೋಲು ಖಚಿತ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲು ಸಿದ್ದರಾಮಯ್ಯ ಅವರು ಅಭಿಮಾನಿಗಳು ನಿರ್ಧಾರ ಮಾಡಿರುವ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಬಿಜೆಪಿ ವ್ಯಂಗ್ಯವಾಡಿದೆ.

ಕಾಂಗ್ರೆಸ್ಸಿಗರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸುತ್ತಿದ್ದಾರೆ. ಟವಲ್ ಈಗಲೇ ಹಾಕಬೇಡಿ, ನಾಳೆಯ ದಿನ ಮುಖಭಂಗವಾದಾಗ ಒರೆಸಿಕೊಳ್ಳಲು ತುಂಡು ಬಟ್ಟೆಯೂ ಸಿಗದು.  2013 ರ ಸೋಲನ್ನು ಪರಮೇಶ್ವರ್ ಮರೆತಿಲ್ಲ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ ಎಂದು ವಿಡಿಯೋ ಒಂದನ್ನು ಹಾಕುವ ಮೂಲಕ ಕಾಲೆಳೆದಿದೆ.

ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ!

ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ ಎಂದು ಬಿಜೆಪಿ ಅಪಹಾಸ್ಯ ಮಾಡಿದೆ.

ಮುಖ್ಯಮಂತ್ರಿ ಪದವಿಯ ಆಸೆಗಾಗಿ ಸಿದ್ಧರಾಮಯ್ಯ ತಮ್ಮ ಹಳೆಯ ಅಹಿಂದ ಕಾರ್ಡ್ ಬಳಸುತ್ತಿದ್ದಾರೆ.ಅಹಿಂದ ಕಾರ್ಡ್‌ ಎಕ್ಸ್‌ಪೈರ್‌ ಆಗಿದೆ. ಕಳೆದ ಬಾರಿ ಇದೇ ಕಾರ್ಡ್ ತೋರಿಸಿ ಮೋಸ ಮಾಡಿದ್ದನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ ಎಂದಿದೆ.

ನಕಲಿ ಗಾಂಧಿ ಕುಟುಂಬಸ್ಥರು ಪ್ರತಿಬಾರಿಯೂ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಒಂದಾಗಿರಬೇಕೆಂದು ಸೂಚನೆ ನೀಡುತ್ತಾರೆ. ದೆಹಲಿಯಲ್ಲಿ ಹೂಂಗುಟ್ಟಿ ಬರುವ ಕಾಂಗ್ರೆಸ್ಸಿಗರು ಬೆಂಗಳೂರಿಗೆ ಬಂದ ಕೂಡಲೇ ಒಬ್ಬರ ವಿರುದ್ಧ ಇನ್ನೊಬ್ಬರು ಕತ್ತಿ ಮಸೆಯುತ್ತಾರೆ. ತಾಳಮೇಳ ಇಲ್ಲದ ಕೈ ನಾಯಕರಿಂದಾಗಿಯೇ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಟೀಕಿಸಿದೆ.
ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲೆತ್ತಲು ಸಿದ್ದರಾಮೊತ್ಸವ ಮೂಲಕ ವೇದಿಕೆ ಸಜ್ಜುಗೊಳಿಸುತ್ತಿರುವ ಸಿದ್ದರಾಮಯ್ಯ ಬಣದ ನಾಯಕರು ಒಂದೆಡೆಯಾದರೆ, ಇದೇ ಸಿದ್ದರಾಮಯ್ಯರನ್ನು ಕೆಡವಲು ಖೆಡ್ಡಾ ತೋಡುತ್ತಿರುವ ಡಿಕೆ ಶಿವಕುಮಾರ್‌ ಬಣದ ನಾಯಕರು ಮತ್ತೊಂದೆಡೆ. ಈ 2 ಬಣಗಳ ನಡುವೆ ದೆಹಲಿಯ ನಕಲಿ ಗಾಂಧಿಗಳ ಬಣ ಮೂಕ ಪ್ರೇಕ್ಷಕರಷ್ಟೇ! ಎಂದಿದೆ.

ಸಿದ್ದರಾಮಯ್ಯ ಅವರೇ ನೀವು ಯಾರನ್ನೂ ಓವರ್‌ ಟೇಕ್‌ ಮಾಡಿದರೂ ಕಾಂಗ್ರೆಸ್‌ ನಿಮ್ಮನ್ನು ಓವರ್‌ ಟೇಕ್‌ ಮಾಡದೆ ಬಿಡದು. 2018 ರಲ್ಲಿ ಅನುಭವಿಸಿದ್ದೀರಿ, 2023 ರಲ್ಲಿ ಡಿಕೆಶಿ, ಖರ್ಗೆ, ಪರಮೇಶ್ವರ್‌ ಸೇರಿಕೊಂಡು ನಿಮ್ಮನ್ನು ಓವರ್‌ ಟೇಕ್‌ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಮುಂಚೂಣಿ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುವುದು ಎಂದರೆ ಕಪ್ಪೆಯನ್ನು ಹಿಡಿದು ತಕ್ಕಡಿಯಲ್ಲಿ ತೂಕ ಮಾಡಿದಂತೆ.

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸಮಾವೇಶ ಆಯೋಜಿಸಿದ್ದಾರೆ ಎಂದರೆ ಬಂಡಾಯದ ಬಾವುಟ ಹಾರಿಸಿದ್ದಾರೆಂದೇ ಅರ್ಥ ಎಂದು ಟಾಂಗ್ ನೀಡಿದೆ.