ಮನೆ ಅಪರಾಧ ಹುಬ್ಬಳ್ಳಿ: ಚೂರಿಯಿಂದ ಇರಿದು ಯುವತಿಯನ್ನು ಹತ್ಯೆಗೈದ ಯುವಕ

ಹುಬ್ಬಳ್ಳಿ: ಚೂರಿಯಿಂದ ಇರಿದು ಯುವತಿಯನ್ನು ಹತ್ಯೆಗೈದ ಯುವಕ

0

ಹುಬ್ಬಳ್ಳಿ: ನಸುಕಿನ ಜಾವ ನಸುನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಹತ್ಯೆ ಮಾಡಿದ ಭೀಕರ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರದಲ್ಲಿ ನಡೆದಿದೆ.

Join Our Whatsapp Group

ಮೃತ ಯುವತಿಯನ್ನು ಅಂಜಲಿ ಅಂಬಿಗೇರ ಎಂದು ಗುರುತಿಸಲಾಗಿದೆ. ವಿಶ್ವ ಅಲಿಯಾಸ್ ಗಿರೀಶ್ ಎಂಬಾತ ಈ ಯುವತಿಯನ್ನು ಹತ್ಯೆ ಮಾಡಿದ್ದು, ನಂತರ ತಲೆಮರೆಸಿಕೊಂಡಿದ್ದಾನೆ.

ನೇಹಾ ಮಾದರಿಯಲ್ಲಿ ಹತ್ಯೆ ಮಾಡುತ್ತೇನೆ ಎಂದು ಅಂಜಲಿ ಅಂಬಿಗೇರಗೆ ವಿಶ್ವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಅದರಂತೆಯೇ ಬುಧವಾರ ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ವಿಶ್ವ ಧಮ್ಕಿ ಹಾಕಿದ್ದ. ಅಕಸ್ಮಾತ್ ನೀನು ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಆದ ಹಾಗೆಯೇ ನಿನಗೂ ಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದ. ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾದ ಆರೋಪವೂ ಇದೆ. ಜತೆಗೆ, ಬೈಕ್ ಕಳ್ಳತನದಲ್ಲಿಯೂ ಆರೋಪಿಯಾಗಿದ್ದಾನೆ.

ಆರೋಪಿ ವಿಶ್ವ ಅಂಜಲಿಗೆ ಧಮ್ಕಿ ಹಾಕಿರುವ ವಿಚಾರವಾಗಿ ಆಕೆಯ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಹೆಚ್ಚು ಪ್ರಾಶಸ್ತ್ಯ ನೀಡದ ಪೊಲೀಸರು, ಇದೆಲ್ಲ ಮೂಢನಂಬಿಕೆ ಎಂದು ಹೇಳಿ ಕಳುಹಿಸಿದ್ದರು. ಪರಿಣಾಮವಾಗಿ ಇದೀಗ ಮತ್ತೊಂದು ಕೊಲೆಯಾಗಿದೆ.

ಹಿಂದಿನ ಲೇಖನಕೋರ್ಟ್​ ತೀರ್ಪಿನ ಬಳಿಕ ನ್ಯಾಯಾಲಯದ ಆವರಣದಿಂದ ಅಪರಾಧಿ ಪರಾರಿ
ಮುಂದಿನ ಲೇಖನಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿ ಉರಿದ ಟಿಪ್ಪರ್ ಲಾರಿ- ಬಸ್: ಆರು ಮಂದಿ ಸಜೀವ ದಹನ