ಹುಬ್ಬಳ್ಳಿ: ಇಲ್ಲಿನ ಇಂದಿರಾ ಗಾಜಿನ ಮನೆ ಪಕ್ಕದಲ್ಲಿರುವ ಬಾವಿಯಲ್ಲಿ ಯುವಕನೋರ್ವನ ಶವ ಸೋಮವಾರ (ಸೆ.02) ಬೆಳಗ್ಗೆ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಮೃತ ಯುವಕನನ್ನು ಗಿರಣಿಚಾಳ ನಿವಾಸಿ ಹುಲ್ಲೇಶ ಹಾಲಹರವಿ (37) ಎಂದು ಗುರುತಿಸಲಾಗಿದೆ. ಸ್ಥಳೀಯರು ಬಾವಿಯಲ್ಲಿದ್ದ ಶವ ಕಂಡು ಉಪನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
Saval TV on YouTube