ಮನೆ ಅಪರಾಧ ಹುಬ್ಬಳ್ಳಿ ಗಲಭೆ ಪ್ರಕರಣ: 88 ಮಂದಿ ಬಂಧನ, 144 ಸೆಕ್ಷನ್ ಜಾರಿ

ಹುಬ್ಬಳ್ಳಿ ಗಲಭೆ ಪ್ರಕರಣ: 88 ಮಂದಿ ಬಂಧನ, 144 ಸೆಕ್ಷನ್ ಜಾರಿ

0

ಹುಬ್ಬಳ್ಳಿಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್​ ವಿರೋಧಿಸಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಕಾರ್ಪೊರೇಟರ್ ಪತಿ ಸೇರಿದಂತೆ ಇದುವರೆಗೆ 88 ಮಂದಿಯನ್ನು ಬಂಧಿಸಲಾಗಿದ್ದು, 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಹೈ ಅಲರ್ಟ್ ಆಗಿದ್ದು, 10 ತಂಡಗಳನ್ನು ರಚಿಸಲಾಗಿದೆ, ಹುಬ್ಬಳ್ಳಿ ನಗರ ಸುತ್ತಮುತ್ತ ನಾಕಾಬಂಧಿ ಹಾಕಲಾಗಿದೆ.

ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಇಷ್ಟು ದೊಡ್ಡ ಪ್ರಮಾಣದ ಕಲ್ಲುಗಳನ್ನು ಹೇಗೆ ಸಂಗ್ರಹಿಸಲಾಗಿದೆ ಎಂಬುದನ್ನೂ ನಾವು ತನಿಖೆ ಮಾಡುತ್ತಿದ್ದೇವೆ. ಪ್ರಕರಣದಲ್ಲಿ ಹೆಚ್ಚಿನವರನ್ನು ಬಂಧಿಸುವ ಸಾಧ್ಯತೆಯಿದೆ. ಖಾಸಗಿ ವಾಹನಗಳಿಗೆ ಹಾನಿಯಾಗಿರುವುದು ಹಾಗೂ ಸಾರ್ವಜನಿಕರಿಗೆ ಗಾಯಗಳಾಗಿರುವ ಬಗ್ಗೆ ಮಾಹಿತಿಗಳು ಬಂದಿವೆ. ಜನರು ದೂರುಗಳನ್ನು ಠಾಣೆಗೆ ಬಂದು ವರದಿ ಮಾಡಬೇಕೆಂದು ಪೊಲೀಸರು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆ ಆದೇಶವನ್ನು ನಾಡಿದ್ದು 20ವರೆಗೆ ವಿಸ್ತರಿಸಲಾಗಿದೆ. ಅಲ್ಲದೆ, ಪರಿಸ್ಥಿತಿ ಹದಗೆಡದಂತೆ ಇತರೆ ಜಿಲ್ಲೆಗಳಿಗೆ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠರು ಮಾಹಿತಿ ನೀಡಿದ್ದಾರೆ.