ಮನೆ ಅಪರಾಧ ಹುಬ್ಬಳ್ಳಿ ಗಲಭೆ ಪ್ರಕರಣ: ಅಲ್ಪಸಂಖ್ಯಾತ ಆಯೋಗದಿಂದ ಮಾಹಿತಿ ಸಂಗ್ರಹ

ಹುಬ್ಬಳ್ಳಿ ಗಲಭೆ ಪ್ರಕರಣ: ಅಲ್ಪಸಂಖ್ಯಾತ ಆಯೋಗದಿಂದ ಮಾಹಿತಿ ಸಂಗ್ರಹ

0

ಹುಬ್ಬಳ್ಳಿ(Hubballi): ನಗರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹಾಗೂ ಕಾರ್ಯದರ್ಶಿ ಮೊಹಮದ್ ನಜೀರ್ ಅವರು, ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಗುರುವಾರ ಭೇಟಿ ನೀಡಿ, ಗಲಭೆ ಕುರಿತು ಮಾಹಿತಿ ಪಡೆದರು.

ನಂತರ, ದಿಡ್ಡಿ ಓಣಿಯ ಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿ, ಹಾನಿಯನ್ನು ಪರಿಶೀಲಿಸಿದರು. ದೇಗುಲದ ಟ್ರಸ್ಟಿ ಮತ್ತು ಅರ್ಚಕರಿಂದ ಘಟನೆ ಬಗ್ಗೆ ಮಾಹಿತಿ ಪಡೆದರು. ಮುಂದೆ ಹೀಗಾಗದಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ. ಗೋಪಾಲಕೃಷ್ಣ, ಡಿಸಿಪಿ ಸಾಹಿಲ್ ಬಾಗ್ಲಾ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಹಾಗೂ ಪ್ರಭಾರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಡಾ. ಎನ್.ಆರ್. ಪುರುಷೋತ್ತಮ ಇದ್ದರು.