ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ 400 ಹುದ್ದೆಗಳು ಖಾಲಿಯಿದ್ದು, ಅದನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್ ಮೀಸಲಿಡಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 52,640 ರೂ. ಮಾಸಿಕ ವೇತನ ದೊರೆಯಲಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ಪಶುವೈದ್ಯಕೀಯ ವಿಜ್ಞಾನ ವಿಶ್ವ ವಿದ್ಯಾನಿಲಯ ಅಥವಾ ಕೃಷಿ ವಿಶ್ವ ವಿದ್ಯಾನಿಲಯದಿಂದ ಬಿ.ವಿ.ಎಸ್.ಸಿ. / ಬಿ.ವಿ.ಎಸ್.ಸಿ ಆಯಂಡ್ ಎಎಚ್ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಂಪೂರ್ಣ ಮಾಹಿತಿ ಈ ಪಿಡಿಎಫ್ನಲ್ಲಿದ್ದು, ಈ pdf ಲಿಂಕ್ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಪ್ರವರ್ಗ 2 ಎ, 2 ಬಿ, ಪ್ರವರ್ಗ 3 ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.
ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್ 14ರಿಂದ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನಾಂಕ ಜೂನ್ 24. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (ahvs.karnataka.gov.in). ಈ ನೇಮಕಾತಿ ಗುತ್ತಿಗೆ ಆಧಾರದಲ್ಲಿ ನಡೆಯುತ್ತಿದ್ದು, ತಾತ್ಕಾಲಿಕವಾಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕದಲ್ಲಿ ವಾಸವಾಗಿರಬೇಕು.