ಮನೆ ರಾಜ್ಯ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 2.38 ಕೋಟಿ ರೂ. ಸಂಗ್ರಹ

ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 2.38 ಕೋಟಿ ರೂ. ಸಂಗ್ರಹ

0

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 36 ದಿನಗಳ ಅವಧಿಯಲ್ಲಿ 2.38 ಕೋಟಿ ರೂ. ಸಂಗ್ರಹವಾಗಿದೆ.

ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು.

ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 8 ಗಂಟೆಯವರೆಗೂ ನಡೆಯಿತು.

ಈ ಬಾರಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭೇಟಿ ನೀಡಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ ಹಾಗೂ ಸರ್ಕಾರಿ ರಜೆ ದಿನಗಳಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,38,43,177 ರೂ. ನಗದು, 63 ಗ್ರಾಂ ಚಿನ್ನ ಹಾಗೂ 3.173 ಕೆ.ಜಿ. ಬೆಳ್ಳಿ ಸಂಗ್ರಹವಾಗಿದೆ.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಲೆಕ್ಕ ಅಧೀಕ್ಷಕ ನಾಗೇಶ್, ಎಸ್‌ಡಿಎ ಮಹದೇವಸ್ವಾಮಿ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಹಿಂದಿನ ಲೇಖನಅಪಘಾತದಲ್ಲಿ ಮೆದುಳು ನಿಷ್ಕ್ರಿಯ: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ಮುಂದಿನ ಲೇಖನಆದಿತ್ಯ L-1 ಉಡಾವಣೆ ಯಶಸ್ವಿ