ಮನೆ ರಾಜ್ಯ ಹುಣಸೂರು: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

ಹುಣಸೂರು: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

0

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ವಲಯದ ಬಫರ್ ಝೋನ್‌ ನಲ್ಲಿ ಸುಮಾರು 9 ವರ್ಷದ ಗಂಡು ಕಾಡುಕೋಣವೊಂದು ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದೆ.

Join Our Whatsapp Group

ಆನೆಚೌಕೂರು ವನ್ಯಜೀವಿ ವಲಯದ ಚನ್ನಂಗಿ ಶಾಖೆಯ ದೇವಮಚ್ಚಿ ಮೀಸಲು ಅರಣ್ಯ ಪ್ರದೇಶದ ಅಬ್ಬೂರು ಗಸ್ತಿನ ಕೆಸುವಿನಕೆರೆ ಹಾಡಿಯ ಪಿ.ಆರ್.ಮುತ್ತರಿಗೆ ಸೇರಿದ ಅರಣ್ಯ ಹಕ್ಕುಪತ್ರ ಹೊಂದಿರುವ ಜಮೀನಿನಲ್ಲಿ ಕಾಡುಕೋಣದ ಶವ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.

ಮಾಹಿತಿ ಮೇರೆಗೆ ಕೃತ್ಯ ನಡೆದ ಸ್ಥಳಕ್ಕೆ ಎಸಿಎಫ್ ದಯಾನಂದ್, ಆರ್.ಎಫ್.ಓ ದೇವರಾಜ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯ ಪಶು ವೈದ್ಯಾಧಿಕಾರಿ ಹಾಗೂ ಆನೆಗಳ ಪ್ರಭಾರಕ ಡಾ.ರಮೇಶ್ ಮರಣೋತ್ತರ ಪರೀಕ್ಷೆ ನಡೆಸಿದರು.

ಅಪರಿಚಿತ ದುಷ್ಕರ್ಮಿಗಳ ಮೇಲೆ ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕೃತ್ಯ ನಡೆಸಿರುವ ದುಷ್ಕರ್ಮಿಗಳ ಪತ್ತೆಗೆ ತಂಡ ರಚಿಸಲಾಗಿದೆ ಎಂದು ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

ಹಿಂದಿನ ಲೇಖನಗದಗ ಕೊಲೆ ಪ್ರಕರಣ: ದರೋಡೆಯ ಉದ್ದೇಶವಿಲ್ಲ, ಕೊಲೆ ಮಾಡಲೆಂದೆ ಬಂದಿದ್ದಾರೆ- ಐಜಿಪಿ
ಮುಂದಿನ ಲೇಖನಲೋಕಸಭೆ ಚುನಾವಣೆ: ಏಪ್ರಿಲ್ 25, 26ರಂದು ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧ