ಮನೆ ಅಪರಾಧ ಹುಣಸೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

ಹುಣಸೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

0

ಹುಣಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ.

Join Our Whatsapp Group

ರಾಷ್ಟ್ರೀಯ ಹೆದ್ದಾರಿ 275 ರ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಈ ಘಟನೆ ನಡೆದಿದ್ದು, ಶುಕ್ರವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಮೈಸೂರು ಕಡೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದಾರಿಹೋಕರು ಮಾಹಿತಿ ನೀಡಿದ ಮೇರೆಗೆ ಬಿಳಿಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಹುಣಸೂರು ಶವಾಗಾರಕ್ಕೆ ಸಾಗಿಸಿದ್ದಾರೆ.

ಮಹಿಳೆಯ ಕೈಯಲ್ಲಿ ಗೋವಿಂದ ಎಂದು ಹಚ್ಚೆ ಹಾಕಿಸಿಕೊಂಡಿದ್ದು, ಇವರ ಬಗ್ಗೆ ಮಾಹಿತಿ ಇದ್ದವರು  9480805057 ಗೆ ಸಂಪರ್ಕಿಸುವಂತೆ ಇನ್ಸ್ ಪೆಕ್ಟರ್ ಲೋಲಾಕ್ಷಿ ಮನವಿ ಮಾಡಿದ್ದಾರೆ.

ಹಿಂದಿನ ಲೇಖನರಸ್ತೆಯ ಡಿವೈಡರ್ ​ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಮುಂದಿನ ಲೇಖನಪತ್ನಿ ಮೇಲೆ ಕ್ರೌರ್ಯ ಎಸಗಿದ ಆರೋಪ: ವೈದ್ಯ ಪತಿಗೆ ನಿರೀಕ್ಷಣಾ ಜಾಮೀನು- ಹೈಕೋರ್ಟ್