ಮನೆ ರಾಜ್ಯ ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ, ಅಂತ ಗೃಹಿಣಿ ಆತ್ಮಹತ್ಯೆ..!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ, ಅಂತ ಗೃಹಿಣಿ ಆತ್ಮಹತ್ಯೆ..!

0

ಮೈಸೂರು : ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಗೃಹಿಣಿ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ.

ನಗರದ ಸರಸ್ವತಿಪುರಂನ ನಿವಾಸಿ 46 ವರ್ಷದ ಸಂಧ್ಯಾ ಮೃತ ದುರ್ದೈವಿ. ಮನೆಯ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಮೂಲದ ಸಂಧ್ಯಾ 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಎಂಬವರನ್ನು ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಪುತ್ರಿ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಂಧ್ಯಾ ಮನೆಯಲ್ಲಿ ಗಂಡ ಹಾಗೂ ಮಗನ ಜೊತೆ ವಾಸವಿದ್ದರು.

ನಿನ್ನೆ ರಾತ್ರಿ ಪ್ರವಾಸದ ವಿಚಾರದಲ್ಲಿ ಗಂಡ-ಹೆಂಡತಿ ನಡುವೆ ಜಗಳವಾಗಿದೆ. ಗಂಡ ಮನೆಯಿಂದ ಹೊರ ಹೋದ ನಂತರ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ. ಆದರೆ, ತನ್ನ ಅಕ್ಕನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿರುವ ಸಹೋದರ ಗುರುಮೂರ್ತಿ, ಗಂಡ ಹಾಗೂ ಮಗನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.