ಮನೆ ಕಾನೂನು ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಜೈಲು

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಜೈಲು

0

ಶಿವಮೊಗ್ಗ : ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ.

ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಶಿಕ್ಷೆಗೊಳಗಾದ ಅಪರಾಧಿ. ಈತ 2018 ರಲ್ಲಿ ಮದುವೆಯಾಗಿದ್ದು. ಮುದುವೆಯಾದ ಕೆಲ ವರ್ಷಗಳ ಬಳಿಕ ಹೆಂಡತಿಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದ. ಹೆಂಡತಿ ಮತ್ತೆ ಮನೆಗೆ ಬಂದಾಗ ಆಕೆಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ.

ಈ ಸಂಬಂಧ ಶಿವಮೊಗ್ಗ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪ ಸಾಬೀತಾದ ಹಿನ್ನೆಲೆ ಶಿವಮೊಗ್ಗ 2 ನೇ ಜೆಎಂಎಫ್ ಸಿ ನ್ಯಾಯಾಲಯ ಅಪರಾಧಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 1,೦೦೦ ರೂ. ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.