ಮನೆ ಅಪರಾಧ ಹೈದರಾಬಾದ್: ನಿರ್ಮಾಣ ಹಂತದ ಅಪಾರ್ಟ್‌ ಮೆಂಟ್‌ ತಡೆಗೋಡೆ ಕುಸಿದು 7 ಮಂದಿ ಸಾವು

ಹೈದರಾಬಾದ್: ನಿರ್ಮಾಣ ಹಂತದ ಅಪಾರ್ಟ್‌ ಮೆಂಟ್‌ ತಡೆಗೋಡೆ ಕುಸಿದು 7 ಮಂದಿ ಸಾವು

0

ಹೈದರಾಬಾದ್: ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದ ಅಪಾರ್ಟ್‌ ಮೆಂಟ್‌ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

Join Our Whatsapp Group

ಮೃತರು ಒಡಿಶಾ ಮತ್ತು ಛತ್ತೀಸಗಢಕ್ಕೆ ಸೇರಿದ ಕಾರ್ಮಿಕರಾಗಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ ನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ  ಮಂಗಳವಾರ ಭಾರಿ ಮಳೆ ಸುರಿದಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಲವೆಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿರುವುದರಿಂದ ವಾಹನ ಸಂಚಾರಕ್ಕೂ ತೊಂದರೆ ಉಂಟಾಗಿತ್ತು. ಪೊಲೀಸರು ಸೇರಿದಂತೆ ಡಿಆರ್‌ಎಫ್ ಸಿಬ್ಬಂದಿ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಿಂದಿನ ಲೇಖನಮಾನವ ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾದ ಆರೋಪ: ರಷ್ಯಾದ ಉದ್ಯೋಗಿ ಸೇರಿ ನಾಲ್ವರ ಬಂಧನ
ಮುಂದಿನ ಲೇಖನಉಡುಪಿ: ತೊಟ್ಟಂ ಬೀಚ್‌ ನಲ್ಲಿ ಮುಳುಗುತ್ತಿದ್ದವರ ರಕ್ಷಣೆ