ಅಮರಾವತಿ : ಅಮೆರಿಕದ ವೀಸಾ ಸಿಗದ ಕಾರಣ ಖಿನ್ನತೆಗೆ ಒಳಗಾಗಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಮಹಿಳಾ ವೈದ್ಯೆ ಹೈದರಾಬಾದ್‌ನಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರೋಹಿಣಿ (38) ಮೃತ ವೈದ್ಯೆ ಎಂದು ಗುರುತಿಸಲಾಗಿದೆ. ಎಷ್ಟೇ ಬಾಗಿಲು ಬಡಿದರೂ ತೆಗೆಯದೇ ಇದ್ದಾಗ ಅನುಮಾನಗೊಂಡ ಮನೆಕೆಲಸದಾಕೆ ಹೈದರಾಬಾದ್‌ನ ಅದೇ ನಗರದಲ್ಲಿ ವಾಸಿಸುತ್ತಿದ್ದ ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಮನೆಯವರು ಬಾಗಿಲು ಒಡೆದು ನೋಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅತಿಯಾದ ನಿದ್ರೆ ಮಾತ್ರೆ ಸೇವಿಸಿ ಅಥವಾ ಇಂಜೆಕ್ಷನ್ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ, ವರದಿ ಬಂದ ಬಳಿಕ ನಿಖರ ಕಾರಣ ತಿಳಿಯುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳಾ ವೈದ್ಯೆ ಆತ್ಮಹತ್ಯೆ ಬಳಿಕ ಪೊಲೀಸರ ಶೋಧದ ವೇಳೆ ಡೆತ್ ನೋಟ್ ಪತ್ತೆಯಾಗಿದೆ.
ಇದರಲ್ಲಿ ಆಕೆ ಅಮೆರಿಕದ ವೀಸಾ ತಿರಸ್ಕರಿಸಿದ್ದಕ್ಕಾಗಿ ಖಿನ್ನತೆಗೆ ಒಳಗಾಗಿದ್ದೆ ಬರೆದಿದ್ದಾರೆ. ಮೃತ ವೈದ್ಯೆಯ ತಾಯಿ ಲಕ್ಷ್ಮಿ, ಈ ಬಗ್ಗೆ ಪ್ರತಿಕ್ರಿಯಿಸಿ, ತಮ್ಮ ಮಗಳು ಕೆಲಸಕ್ಕಾಗಿ ಅಮೆರಿಕಕ್ಕೆ ಹೋಗಲು ಕಾಯುತ್ತಿದ್ದಳು, ಆದರೆ ವೀಸಾ ನಿರಾಕರಣೆಯಿಂದಾಗಿ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಿದ್ದಾರೆ. ಈ ಸಂಬಂದ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.















