ಮನೆ ರಾಷ್ಟ್ರೀಯ ಹೈದರಾಬಾದ್: ಇದೇ ಮೊದಲ ಬಾರಿಗೆ ವೈದ್ಯರಾಗಿ ಇಬ್ಬರು ಮಂಗಳಮುಖಿಯರ ನೇಮಕ

ಹೈದರಾಬಾದ್: ಇದೇ ಮೊದಲ ಬಾರಿಗೆ ವೈದ್ಯರಾಗಿ ಇಬ್ಬರು ಮಂಗಳಮುಖಿಯರ ನೇಮಕ

0

ಹೈದರಾಬಾದ್: ಇದೇ ಮೊದಲ ಬಾರಿಗೆ ಮಂಗಳಮುಖಿಯರಿಬ್ಬರು ತೆಲಂಗಾಣದಲ್ಲಿ ಸರ್ಕಾರಿ ವೈದ್ಯರಾಗಿ ನೇಮಕವಾಗಿದ್ದು, ಹೊಸ ಇತಿಹಾಸ ಬರೆದಿದ್ದಾರೆ.

ಎಂಬಿಬಿಎಸ್ ಪದವಿ ಮುಗಿಸಿರುವ ಪ್ರಾಚಿ ರಾತೋಡ್ ಹಾಗೂ ರುತ್ ಜಾನ್ ಪೌಲ್ ಅವರೇ ಈ ಸಾಧನೆ ಮಾಡಿದವರು.

2015 ರಲ್ಲಿ ಈ ಲೈಂಗಿಕ ಅಲ್ಪಸಂಖ್ಯಾತರು ಎಂಬಿಬಿಎಸ್ ಪದವಿ ಮುಗಿಸಿದ್ದರು. ನಂತರ ಕೆಲ ವರ್ಷ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.

ಆದರೆ, ಇವರ ಸೇವೆ ಪಡೆಯಲು ಅನೇಕ ಆಸ್ಪತ್ರೆಗಳು ಹಾಗೂ ರೋಗಿಗಳು ಮುಂದೆ ಬರುತ್ತಿರಲಿಲ್ಲ.ಪ್ರಾಚಿ ರಾತೋಡ್ ಅವರ ಲಿಂಗ ವಿಚಾರವಾಗಿ ಅವರು ಸೇವೆ ಸಲ್ಲಿಸುತ್ತಿದ್ದ ಒಂದು ದೊಡ್ಡ ಖಾಸಗಿ ಆಸ್ಪತ್ರೆಯಿಂದ ಅವರನ್ನು ಸೇವೆಯಿಂದ ವಜಾ ಮಾಡಲಾಗಿತ್ತು.

ಈ ಇಬ್ಬರೂ ಮಂಗಳಮುಖಿಯರನ್ನು ತೆಲಂಗಾಣದ ಸರ್ಕಾರಿ ಆಸ್ಪತ್ರೆಯಾಗಿರುವ ಓಸ್ಮಾನಿಯಾ ಸಾರ್ವಜನಿಕ ಆಸ್ಪತ್ರೆಯ ಸೇವೆಗೆ ನಿಯೋಜಿಸಲಾಗಿದೆ.

ಹಿಂದಿನ ಲೇಖನಬೆಂಗಳೂರು: ಕುಡುಕನ ಬಳಿ ದಾಖಲೆ ಇಲ್ಲದ ಕೆಜಿಗಟ್ಟಲೇ ಚಿನ್ನಾಭರಣ, ನಗದು ಪತ್ತೆ
ಮುಂದಿನ ಲೇಖನವೈವಾಹಿಕ ವ್ಯಾಜ್ಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್’ನಿಂದ ಮಹಿಳಾ ಪೀಠ ರಚನೆ