ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ, ಅದು ನನ್ನ ವಯಕ್ತಿಕ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ. ನಾವು ಹಿಂದುಗಳಲ್ವಾ? ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ವಿಶೇಷ ಪೂಜೆ ಸಲ್ಲಿಸುತ್ತೇವೆ ಅದರಲ್ಲೇನು ತಪ್ಪಿದೆ ಎಂದಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಕೆಲ ದಿನಗಳ ಹಿಂದೆ ವರದಿಯಾಗಿತ್ತು.
Saval TV on YouTube